ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಳಗಾವಿ: ಪಾದಯಾತ್ರೆ ಮೂಲಕ ವೀರ ಸೌಧಕ್ಕೆ ಆಗಮಿಸಿದ ಕಾಂಗ್ರೆಸ್ ವರಿಷ್ಠರು

ಬೆಳಗಾವಿ: ಮಹಾತ್ಮಗಾಂಧಿ ಅವರ ಅಧ್ಯಕ್ಷತೆಯಲ್ಲಿ ನಡೆದ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಮತ್ತು ಕಾಂಗ್ರೆಸ್ ಕಾರ್ಯಕಾರಿಣಿ ಸಭೆಗಾಗಿ ವೀರಸೌಧಕ್ಕೆ ಗಾಂಧಿ ಭಾವಚಿತ್ರದೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ವರಿಷ್ಠರು ಪಾದಯಾತ್ರೆ ಮೂಲಕ ಆಗಮಿಸಿದರು.‌

ಬಳಿಕ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಧ್ವಜಾರೋಹಣ ನೆರವೇರಿಸುವ ಮೂಲಕ ಕಾರ್ಯಕಾರಿಣಿಗೆ ಚಾಲನೆ ನೀಡಿದರು. ಕಾಂಗ್ರೆಸ್ ಕಾರ್ಯಕಾರಿಣಿ ಸಮಿತಿ (CWC) ವಿಸ್ತರಿತ ಸಭೆಯಲ್ಲಿ ಪಾಲ್ಗೊಳ್ಳಲು ಬೆಳಗಾವಿ ತಿಲಕವಾಡಿಯ ವೀರಸೌಧಕ್ಕೆ ಆಗಮಿಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಹಿರಿಯ ಮುಖಂಡ ಜೈರಾಮ್ ರಮೇಶ್, ಸಿಎಂ ಸಿದ್ದರಾಮಯ್ಯ ಅವರನ್ನು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಶಾಲು ಹೊದಿಸಿ ಬರಮಾಡಿಕೊಂಡರು.

Edited By : Suman K
PublicNext

PublicNext

26/12/2024 08:25 pm

Cinque Terre

14.91 K

Cinque Terre

2

ಸಂಬಂಧಿತ ಸುದ್ದಿ