ಶಿವಮೊಗ್ಗ : ಪ್ರಾಥಮಿಕ ಮತ್ತು ಪ್ರೌಢಶಾಲಾ ಹಂತದಲ್ಲಿ ಮಕ್ಕಳಿಗೆ ಪರಿಣಾಮಕಾರಿಯಾಗಿ ಬೋದಿಸಲು ಶಿಕ್ಷಕರಿಗೆ ಸಹಪಠ್ಯ ಚಟುವಟಿಕೆಗಳು ಸಹಕಾರಿಯಾಗಿವೆ ಎಂದು ಶಿವಮೊಗ್ಗ ನಗರ ಕ್ಷೇತ್ರದ ಶಾಸಕ ಎಸ್.ಎನ್.ಚನ್ನಬಸಪ್ಪ ಹೇಳಿದರು.
ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ, ವಿದ್ಯಾರ್ಥಿಗಳ ಕ್ಷೇಮಾಭಿವೃದ್ಧಿ ನಿಧಿ, ಜಿಲ್ಲಾಡಳಿತ ಸೇರಿದಂತೆ ವಿವಿಧ ಇಲಾಖೆ ವತಿಯಿಂದ ಮಾಚೇನಹಳ್ಳಿಯ ಸೀಮಾ ಆಂಗ್ಲಶಾಲೆಯಲ್ಲಿ ಏರ್ಪಡಿಸಲಾಗಿದ್ದ ಪ್ರಸಕ್ತ ಶೈಕ್ಷಣಿಕ ಸಾಲಿನ ರಾಜ್ಯ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರ ಸಹಪಠ್ಯ ಚಟುವಟಿಕೆಗಳ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದ ಅವರು ಭವಿಷ್ಯದ ಸಮಾಜ ನಿರ್ಮಾತೃಗಳನ್ನು ರೂಪಿಸುವ ಶಿಕ್ಷಕರ ಕಾರ್ಯ ಸ್ಮರಣೀಯವಾದುದು ಎಂದ ಅವರು, ಶಿಕ್ಷಕರು ಪಠ್ಯಕ್ಕೆ ಸಹಕಾರಿಯಾಗುವ ಸಹಪಠ್ಯ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವುದರಿಂದ ಶಿಕ್ಷಕರಲ್ಲಿ ಪರಿಣಾಮಕಾರಿ ಬೋದನಾ ವಿಧಾನಗಳನ್ನು ಅರಿಯಲಿದ್ದಾರೆ.
ಇದರಿಂದಾಗಿ ತರಗತಿಗಳಲ್ಲಿ ಹಲವು ಪ್ರಕಾರಗಳಲ್ಲಿ ಮಕ್ಕಳನ್ನು ಕಲಿಕೆಗೆ ತೊಡಗಿಸಲು ಪ್ರೇರೇಪಿಸಬಹುದಾಗಿದೆ. ಹಿಂದುಳಿದ ಮಕ್ಕಳ ಕಲಿಕೆಗೆ ವಿಶೇಷ ಪ್ರಯತ್ನ ಇದಾಗಿರಲಿದೆ ಎಂದರು.
Kshetra Samachara
26/12/2024 08:26 pm