ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಕೆಪಿಎಸ್ ಸಿ ಪರೀಕ್ಷೆ ಹಿನ್ನೆಲೆಯಲ್ಲಿ ನಿಷೇಧಾಜ್ಞೆ ಜಾರಿ

ಉಡುಪಿ: ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ ಗ್ರೂಪ್ ಎ ಮತ್ತು ಬಿ ವೃಂದದ ಒಟ್ಟು 384 ಹುದ್ದೆಗಳಿಗೆ ಪೂರ್ವಭಾವಿ ಪರೀಕ್ಷೆಗಳು ಡಿಸೆಂಬರ್ 29ರಂದು ಜಿಲ್ಲೆಯಲ್ಲಿ ನಿಗದಿಪಡಿಸಿದ ಒಟ್ಟು 05 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿವೆ.

ಪರೀಕ್ಷೆಗಳು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಸಲು ಹಾಗೂ ನಡೆಯಬಹುದಾದ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟಲು ಜಿಲ್ಲಾಡಳಿತ ಸಜ್ಜಾಗಿದೆ.ಈ ಹಿನ್ನೆಲೆಯಲ್ಲಿ ನಿಗದಿಪಡಿಸಿದ ಎಲ್ಲಾ ಪರೀಕ್ಷಾ ಕೇಂದ್ರಗಳ ಸುತ್ತಲೂ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಲು, ಸುತ್ತಲೂ 200 ಮೀ. ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023ರ ಕಲಂ 163 ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.

Edited By : PublicNext Desk
Kshetra Samachara

Kshetra Samachara

26/12/2024 08:29 pm

Cinque Terre

13.03 K

Cinque Terre

0