ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಖಾನಾಪುರ ಪೊಲೀಸ್‌ ಠಾಣೆ ಸಿಪಿಐ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬೆಳಗಾವಿ: ಬಿಜೆಪಿ ವಿಧಾನಪರಿಷತ್ ಸದಸ್ಯ ಸಿಟಿ ರವಿ ಅವರ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿಯ ಖಾನಾಪುರ ಪೊಲೀಸ್​ ಠಾಣೆಯ ಸಿಪಿಐ ಮಂಜುನಾಥ್ ನಾಯಕ್ ಅವರನ್ನು ಅಮಾನತು ಮಾಡಲಾಗಿದೆ. ಆದ್ರೆ, ಏಕೆ ಅಮಾನತು ಮಾಡಲಾಗಿದೆ ಎನ್ನುವ ಚರ್ಚೆಗಳು ಶುರುವಾಗಿದ್ದು, ಇದಕ್ಕೆ ಸಿಎಂ ಸಿದ್ದರಾಮಯ್ಯ ಅವರು ಸ್ಪಷ್ಟನೆ ಕೊಟ್ಟಿದ್ದಾರೆ.

ಈ ಬಗ್ಗೆ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಪೊಲೀಸ್ ಠಾಣೆಯಲ್ಲಿ ಬಿಜೆಪಿಗರಿಗೆ ಸಭೆ ಮಾಡಲು ಅವಕಾಶ ಕೊಟ್ಟಿದ್ದಾರೆ. ಪೊಲೀಸ್ ಇನ್ಸ್​ಪೆಕ್ಟರ್​ ಸಭೆ ಮಾಡಲು ಅವಕಾಶ ಕೊಟ್ಟರು. ಠಾಣೆಯಲ್ಲಿ ಬಿಜೆಪಿಯವರು ಬಂದು ಸಭೆ ಮಾಡಬಹುದಾ? ಹಾಗಾಗಿ ಸಿಪಿಐ ವಿರುದ್ಧ ಶಿಸ್ತು ಕ್ರಮ ತೆಗೆದುಕೊಂಡಿದ್ದೇವೆ ಎಂದು ತಿಳಿಸುವ ಮೂಲಕ ಎಲ್ಲಾ ಗೊಂದಲಗಳಿಗೆ ತೆರೆ ಎಳೆದರು.

ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ದಾಳಿ ಕುರಿತ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ ಮುನಿರತ್ನ ಮೇಲೆ ಮೊಟ್ಟೆ ಎಸೆದಿರುವುದು ಯಾರು ಅಂತ ಗೊತ್ತಿಲ್ಲ. ಈಗಾಗಲೇ ಇಬ್ಬರನ್ನು ಬಂಧಿಸಲಾಗಿದೆ. ಪಾರ್ಟಿಗೆ ಸೇರಿದವರಾ ಅಥವಾ ಬೇರೆಯವರು ಎನ್ನುವುದು ಗೊತ್ತಿಲ್ಲ ಈ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಸಿಎಂ ಹೇಳಿದರು.

Edited By : Vijay Kumar
PublicNext

PublicNext

26/12/2024 08:30 pm

Cinque Terre

44.89 K

Cinque Terre

0

ಸಂಬಂಧಿತ ಸುದ್ದಿ