ಪಡುಬಿದ್ರಿ : ಪಡುಬಿದ್ರಿ ಠಾಣಾ ವ್ಯಾಪ್ತಿಯ ಬಂಟರ ಸಂಘದ ಎದುರು ರಾ.ಹೆ.66ರಲ್ಲಿ ಪಾದಚಾರಿಯೋರ್ವರಿಗೆ ಕಾರೊಂದು ಢಿಕ್ಕಿ ಹೊಡೆದು ಮೃತಪಟ್ಟ ಘಟನೆ ಗುರುವಾರ ಸಂಜೆ ಘಟಿಸಿದೆ. ಮೃತ ವ್ಯಕ್ತಿಯನ್ನು ಪಡುಬಿದ್ರಿ ಕೆಳಗಿನ ಪೇಟೆಯ ಫ್ಯಾನ್ಸಿ ಅಂಗಡಿಯ ಮಾಲಕ ಶೇಖರ ಶೆಟ್ಟಿಗಾರ್ (65) ಎಂದು ಗುರುತಿಸಲಾಗಿದೆ.
ಮಂಗಳೂರು ಕಡೆಯಿಂದ ಉಡುಪಿ ಕಡೆ ಸಾಗುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ. ಅಪಾಪಘಾತದ ತೀವ್ರತೆಗೆ ಕಾರು ಪಕ್ಕದ ಚರಂಡಿಗೆ ಮಗುಚಿ ಬಿದ್ದಿದೆ. ತೀವ್ರ ಗಾಯಗೊಂಡವರನ್ನು ಅವರನ್ನುಆಸ್ಪತ್ರೆಗೆ ಸಾಗಿಸುವ ಹಾದಿಯಲ್ಲಿ ಮೃತಪಟ್ಟಿದ್ದಾರೆ. ಕಾರು ಚಾಲಕ ಸಣ್ಣ ಪುಟ್ಟ ಗಾಯದೊಂದಿಗೆ ಪಾರಾಗಿದ್ದಾನೆ. ಈ ಬಗ್ಗೆ ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
PublicNext
26/12/2024 08:35 pm