ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘವು ಪ್ರತಿ ವರ್ಷದಂತೆ ಈ ವರ್ಷವೂ ಸಂಸ್ಥಾಪಕರ ದಿನಾಚರಣೆಯನ್ನು ಡಿ.28 ರಂದು ಸಂಜೆ 4:30 ಕ್ಕೆ ಸಂಘದ ಶಾಂತಲಾ ಸ್ಪೆರೋಕ್ಯಾಸ್ಟ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ.ಗೋಪಿನಾಥ್ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆಯ ಅಧ್ಯಕ್ಷ ಎಂ.ಜಿ. ಬಾಲಕೃಷ್ಣ ಆಗಮಿಸಲಿದ್ದಾರೆ. ಅಧ್ಯಕ್ಷತೆ ಯನ್ನು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ.ಗೋಪಿನಾಥ್ ವಹಿಸಲಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ 2024ನೇ ಸಾಲಿನ ಹೆಮ್ಮೆಯ ವಾಣಿಜ್ಯೋದ್ಯಮಿ ಪ್ರಶಸ್ತಿ ಪುರಸ್ಕೃತರಾದ ಮೆ. ಮಾನಸ ವೆಟ್ ಫಾರ್ಮಾ ಪಾಲುದಾರರಾದ ಗಜಾನನ ಹೆಗಡೆ, ಮೆ. ಕನ್ನಿಕಾ ಟ್ರೇಡರ್ಸ್ ಪಾಲುದಾರರಾದ ಹೆಚ್.ಎನ್.ನಂಜುಂಡರಾಜು ಶೆಟ್ಟಿ, ಮೆ. ಶಾಸ್ತ್ರಿ ಆಟೋ ಮೊಬೈಲ್ಸ್ ಮಾಲೀಕ ಪ್ರಶಾಂತ್ ಶಾಸ್ತ್ರಿ ಇವರಿಗೆ ಸನ್ಮಾನಿಸಲಾಗುವುದು ಎಂದರು.
PublicNext
26/12/2024 09:02 pm