ಬೆಂಗಳೂರು: ಸಿದ್ದರಾಮಯ್ಯ ಸರ್ಕಾರ ಅಧಿಕಾರಕ್ಕೆ ಬಂದಾಗಲೆಲ್ಲಾ ರೈತರ ಆತ್ಮಹತ್ಯೆ, ಗುತ್ತಿಗೆದಾರರ ಆತ್ಮಹತ್ಯೆ ಎಲ್ಲವೂ ನಡೆಯುತ್ತಿದೆ. ಇಂದು ಸಚಿನ್ ಎಂಬ ಭಾಲ್ಕಿಯ ಗುತ್ತಿಗೆದಾರ ಪ್ರಿಯಾಂಕ್ ಖರ್ಗೆ ಆಪ್ತನ ಹೆಸರು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಕುರಿತಂತೆ ಸಚಿವ ಪ್ರಿಯಾಂಕ್ ಖರ್ಗೆ ಯಿಂದ ರಾಜೀನಾಮೆ ಪಡೆಯಬೇಕು ಎಂದು ಬಿಜೆಪಿ ರಾಜ್ಯ ಮುಖ್ಯ ವಕ್ತಾರ ಅಶ್ವಥ್ ನಾರಾಯಣ ಆಗ್ರಹಿಸಿದ್ದಾರೆ.
ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ಭಾಲ್ಕಿಯ ಗುತ್ತಿಗೆದಾರ ಪ್ರಿಯಾಂಕ್ ಖರ್ಗೆ ಆಪ್ತನ ಹೆಸರು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ದುಡ್ಡಿಗೆ ಡಿಮ್ಯಾಂಡ್ ಮಾಡುತ್ತಿದ್ದಾರೆ ಎಂಬ ಆರೋಪ ಮಾಡಿದ್ದಾರೆ. ಸಾವಿಗೆ ಯಾರು ಕಾರಣ ಎಂದು ಸಚಿನ್ ಪತ್ರದಲ್ಲಿ ಕೆಲವು ಹೆಸರುಗಳನ್ನು ಉಲ್ಲೇಖ ಮಾಡಿದ್ದಾರೆ.
ಪ್ರಿಯಾಂಕ್ ಖರ್ಗೆ ಆಪ್ತನೇ ಕಾರಣ ಎಂದು ಹೆಸರು ಬರೆದಿದ್ದಾರೆ. ಪ್ರಿಯಾಂಕ್ ಖರ್ಗೆ ಎಲ್ಲದರಲ್ಲೂ ಮೂಗು ತೂರಿಸುತ್ತಾರೆ. ಈಗ ಇದ್ರ ಬಗ್ಗೆ ಏನ್ ಹೇಳ್ತಾರೆ? ಯುವ ಗುತ್ತಿಗೆದಾರ ಸಚಿನ್ ಸಾವಿನ ಬಗ್ಗೆ ತನಿಖೆ ನಡೆಯಬೇಕು. ಪ್ರಿಯಾಂಕ್ ಖರ್ಗೆ ರಾಜೀನಾಮೆಯನ್ನು ಸಿಎಂ ತೆಗೆದುಕೊಳ್ಳಬೇಕು. ಇಲ್ಲದಿದ್ದರೆ ಬಿಜೆಪಿ ಹೋರಾಟ ತೀವ್ರ ಮಾಡುತ್ತದೆ ಎಂದು ಎಚ್ಚರಿಸಿದ್ದಾರೆ.
PublicNext
26/12/2024 10:21 pm