ಬೆಂಗಳೂರು: ಸಂಕ್ರಾಂತಿ ಬಳಿಕ ಹಾಲಿನ ದರ ಏರಿಕೆ ಬಗ್ಗೆ ಸುಳಿವು ನೀಡಿದ್ದಾರೆ ಕೆಎಂಎಫ್ ಅಧ್ಯಕ್ಷ ಭೀಮಾ ನಾಯಕ್. ಈ ಕುರಿತು ಬೆಂಗಳೂರಿನ ಕೆಎಂಎಫ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, ಪ್ರತಿ ಲೀಟರ್ ಹಾಲಿಗೆ 5 ರೂ. ಹೆಚ್ಚಳ ಮಾಡುವಂತೆ ರೈತರಿಂದ ಬೇಡಿಕೆ ಬಂದಿದೆ.
ಹೀಗಾಗಿ ಸಂಕ್ರಾಂತಿ ಹಬ್ಬದ ಬಳಿಕ ಎಲ್ಲಾ ಹಾಲು ಮಂಡಳಿಯ ಜೊತೆ ಸಭೆ ನಡೆಸಿ ಮುಖ್ಯಮಂತ್ರಿ ಜೊತೆಯೂ ಚರ್ಚಿಸಿ ದರ ಏರಿಕೆ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದಿದ್ದಾರೆ. ಇದ್ರ ನಡುವೆ ಈ ಹಿಂದೆ 50 ಎಂಎಲ್ ಹಾಲನ್ನು ನೀಡುವ ಮೂಲಕ ಲೀಟರ್‌ಗೆ 2 ರೂ. ಹೆಚ್ಚಳ ಮಾಡಲಾಗಿತ್ತು. ಹೆಚ್ಚುವರಿ ಹಾಲನ್ನು ವಾಪಸ್ ಪಡೆಯಲು ತೀರ್ಮಾನಿಸಲಾಗಿದೆ ಎಂದು ವಿವರಿಸಿದರು.
PublicNext
26/12/2024 10:38 pm