ಬೆಂಗಳೂರು : ದೇಶ, ರಾಜ್ಯದಲ್ಲಿರುವುದು ಅಸಲಿ ಕಾಂಗ್ರೆಸ್ ಪಕ್ಷವಲ್ಲ, ಇದು ನಕಲಿ ಕಾಂಗ್ರೆಸ್ ಪಕ್ಷ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಟೀಕಿಸಿದ್ದಾರೆ.
ಬೆಂಗಳೂರಿನ ಮಲ್ಲೇಶ್ವರಂ ಕಚೇರಿಯಲ್ಲಿ ಸುದ್ದಿಗೊಷ್ಠಿ ನಡೆಸಿ ಮಾತನಾಡಿದ ಅವರು, ಮಹಾತ್ಮ ಗಾಂಧೀಜಿ ಮತ್ತು ಡಾ. ಅಂಬೇಡ್ಕರ್ ಅವರ ತತ್ವಗಳನ್ನು ಗಾಳಿಗೆ ತೂರಿದ ಪಕ್ಷ ಕಾಂಗ್ರೆಸ್ ಎಂದ ಅವರು, ಗಾಂಧೀಜಿ ಮತ್ತು ಅಂಬೇಡ್ಕರರ ಹೆಸರು ಹೇಳುವ ನೈತಿಕತೆ, ಯೋಗ್ಯತೆ ಕಾಂಗ್ರೆಸ್ಸಿಗರಿಗೆ ಇಲ್ಲ. ಗಾಂಧಿಜೀ ಹೆಸರಿನಲ್ಲಿ ನಕಲಿ ಗಾಂಧಿಗಳು ಬೆಳಗಾವಿಯಲ್ಲಿ ಅಧಿವೇಶನ ಮಾಡಲು ಹೊರಟಿದ್ದಾರೆ.
ಕಾಂಗ್ರೆಸ್ ಪಕ್ಷವು ರಾಜ್ಯದ ಜನರ ಕೋಟಿಗಟ್ಟಲೆ ತೆರಿಗೆ ಹಣವನ್ನು ಬಳಸಿಕೊಂಡು ಬೆಳಗಾವಿಯಲ್ಲಿ ಮಹಾಧಿವೇಶನ ಮಾಡಲು ಹೊರಟಿರುವುದು ಸರಿಯಲ್ಲ ಎಂದು ತಿಳಿಸಿದರು. ನಕಲಿ ಕಾಂಗ್ರೆಸ್ಸಿನ ಈ ನೀತಿಯ ವಿರುದ್ಧ ಬೆಳಗಾವಿಯಲ್ಲಿ ಕಾಂಗ್ರೆಸ್ ಮಹಾಧಿವೇಶನವನ್ನು ವಿರೋಧಿಸಿ ನಾಳೆ ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಮಹಾತ್ಮ ಗಾಂಧಿ ಪ್ರತಿಮೆ ಮುಂದೆ ಧರಣಿ ನಡೆಸಲಿದ್ದೇವೆ.
ವಿಧಾನಸಭೆ- ವಿಧಾನಪರಿಷತ್ತಿನ ಸದಸ್ಯರು ಇದರಲ್ಲಿ ಭಾಗವಹಿಸುವರು ಎಂದು ತಿಳಿಸಿದರು.
PublicNext
27/12/2024 07:36 am