ಮೆಲ್ಬೋರ್ನ್: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನ ಹಿನ್ನೆಲೆ ಅವರಿಗೆ ಶ್ರದ್ಧಾಂಜಲಿ ತಿಳಿಸಲು, ಗೌರವಾರ್ಥವಾಗಿ ಆಸ್ಟ್ರೇಲಿಯಾ ವಿರುದ್ಧದ ಬಾಕ್ಸಿಂಗ್ ಡೇ ಟೆಸ್ಟ್‌ನ 2ನೇ ದಿನದಂದು ಟೀಂ ಇಂಡಿಯಾ ಆಟಗಾರರು ಕಪ್ಪು ಪಟ್ಟಿಯನ್ನು ಧರಿಸಿದ್ದಾರೆ.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ 92 ವರ್ಷದ ಮನಮೋಹನ್ ಸಿಂಗ್ ಅವರನ್ನು ಗುರುವಾರ ರಾತ್ರಿ ದೆಹಲಿಯ ಏಮ್ಸ್‌ಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದ ರಾತ್ರಿ 9:51ಕ್ಕೆ ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಲಾಯಿತು. ಅವರ ನಿಧನದಿಂದ ನಾಡಿನಾದ್ಯಂತ ಶೋಕ ಮಡುಗಟ್ಟಿದ್ದು, ಈ ಹಿನ್ನೆಲೆಯಲ್ಲಿ ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸರಣಿಯನ್ನು ಆಡುತ್ತಿರುವ ಟೀಂ ಇಂಡಿಯಾ ಎರಡನೇ ದಿನದಾಟದಲ್ಲಿ ಮನಮೋಹನ್ ಸಿಂಗ್ ಅವರಿಗೆ ಗೌರವ ಸಲ್ಲಿಸಿ ಕೈಗೆ ಕಪ್ಪು ಪಟ್ಟಿ ಧರಿಸಿ ಮೈದಾನಕ್ಕಿಳಿದಿದ್ದಾರೆ. ಇನ್ನು ಮನಮೋಹನ್ ಸಿಂಗ್ ಅವರ ನಿಧನಕ್ಕೆ ಭಾರತದಲ್ಲಿ ಏಳು ದಿನಗಳ ರಾಷ್ಟ್ರೀಯ ಶೋಕಾಚರಣೆಯನ್ನು ಘೋಷಿಸಲಾಗಿದೆ.
PublicNext
27/12/2024 09:07 am