ಹುಬ್ಬಳ್ಳಿ: ಸಿಲಿಂಡರ್ ಸ್ಪೋಟದಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಅಯ್ಯಪ್ಪ ಮಾಲಾಧಾರಿಗಳ ಪೈಕಿ ಇಂದು ಬೆಳಗಿನ ಜಾವ ಮತ್ತೊಬ್ಬ ಅಯ್ಯಪ್ಪ ಮಾಲಾಧಾರಿ ಚಿಕಿತ್ಸೆ ಫಲಕಾರಿಯಾಗದೆ ಕಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ರವಿವಾರ ನಡು ರಾತ್ರಿ ಸಿಲಿಂಡರ್ ಸ್ಪೋಟಗೊಂಡ ಪರಿಣಾಮ 9 ಜನರು ಗಂಭೀರವಾಗಿ ಗಾಯಗೊಂಡಿದ್ದರು ಈ ಪೈಕಿ ಗುರುವಾರ ಬೆಳಗಿನ ಜಾವ ಸಂಜಯ ಹಾಗೂ ನಿಜಲಿಂಗಪ್ಪ ಎಂಬ ಇಬ್ಬರು ಚಿಕಿತ್ಸೆ ಫಲಕಾರಿಯಾಗದೆ ಕಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು.
ಆದ್ರೆ ಇಂದು ಬೆಳಗಿನ ಜಾವ ರಾಜು ಹರ್ಲಾಪುರ ಎಂಬ 21 ವರ್ಷದ ಅಯ್ಯಪ್ಪ ಮಾಲಾಧಾರಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದು ಇದೀಗ ಸಾವಿನ ಸಂಖ್ಯೆ ಮೂರಕ್ಕೆ ಏರಿಕೆ ಯಾಗಿದೆ.ಇನ್ನುಳಿದ 6 ಜನರಿಗೆ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.
ವಿನಯ ರೆಡ್ಡಿ ಕ್ರೈಂ ಬ್ಯುರೋ ಪಬ್ಲಿಕ್ ನೆಕ್ಸ್ಟ್
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
27/12/2024 09:23 am