ಮೆಲ್ಬೋರ್ನ್: ಆಸ್ಟ್ರೇಲಿಯಾದ ಮಾಜಿ ನಾಯಕ ಸ್ಟೀವ್ ಸ್ಮಿತ್ ಶುಕ್ರವಾರ ಭಾರತದ ವಿರುದ್ಧ ಅತಿ ಹೆಚ್ಚು ಟೆಸ್ಟ್ ಶತಕಗಳನ್ನು ಸಿಡಿಸುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ.
ಮೆಲ್ಬೋರ್ನ್‌ನಲ್ಲಿ ನಡೆದ ಬಾಕ್ಸಿಂಗ್ ಡೇ ಟೆಸ್ಟ್‌ನಲ್ಲಿ ಸ್ಮಿತ್ ಭಾರತದ ವಿರುದ್ಧ ತಮ್ಮ 11ನೇ ಟೆಸ್ಟ್ ಶತಕವನ್ನು ಬಾರಿಸಿದರು. ಅವರು ಭಾರತದ ವಿರುದ್ಧ 10 ಟೆಸ್ಟ್ ಶತಕಗಳನ್ನು ಬಾರಿಸಿದ ಮಾಜಿ ಇಂಗ್ಲೆಂಡ್ ನಾಯಕ ಜೋ ರೂಟ್ ಅವರನ್ನು ಹಿಂದಿಕ್ಕಿದರು. ಸ್ಮಿತ್ ಭಾರತದ ವಿರುದ್ಧ 43 ಟೆಸ್ಟ್ ಇನ್ನಿಂಗ್ಸ್‌ಗಳಲ್ಲಿ 11 ಶತಕಗಳನ್ನು ಬಾರಿಸಿದ್ದಾರೆ.
PublicNext
27/12/2024 11:10 am