ಹುಬ್ಬಳ್ಳಿ: ಹುಬ್ಬಳ್ಳಿಯ ಹೊರ ವಲಯದ ಗದಗ ರಸ್ತೆಯಲ್ಲಿ ವ್ಯಕ್ತಿಯೊಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಿದ ಘಟನೆ ಬೆಂಡಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುರುವಾರ ರಾತ್ರಿ ನಡೆದಿದೆ.
38 ವರ್ಷದ ಸ್ಯಾಮ್ಯುಯಲ್ ಎಂಬಾತನೇ ಕೊಲೆಗೀಡಾದ ವ್ಯಕ್ತಿಯಾಗಿದ್ದು, ಈತ ಹಂದಿ ಸಾಕಾಣಿಕೆ ಮಾಡುತ್ತಿದ್ದ ಎಂಬ ಮಾಹಿತಿ ಲಭ್ಯವಾಗಿದೆ. ಗುರುವಾರ ರಾತ್ರಿ ಗದಗ ರಸ್ತೆಯಲ್ಲಿ ದುಷ್ಕರ್ಮಿಗಳು ಸ್ಯಾಮ್ಯುಯಲ್ ಕಣ್ಣಿಗೆ ಖಾರದ ಪುಡಿಯನ್ನು ಎರಚಿ ಮಾರಕಾಸ್ತ್ರಗಳಿಂದ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಈ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಬೆಂಡಿಗೇರಿ ಠಾಣೆಯ ಇನ್ಸ್‌ಪೆಕ್ಟರ್ ನಾಯಕ್ ಶವವನ್ನು ಕಿಮ್ಸ್ ಶವಾಗಾರಕ್ಕೆ ರವಾನೆ ಮಾಡಿದ್ದಾರೆ. ಕಮಿಷನರ್ ಎನ್ ಶಶಿಕುಮಾರ್ ಕೊಲೆಯಾದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದಾರೆ.
ಸದ್ಯ ಸ್ಯಾಮ್ಯುಯಲ್‌ನನ್ನು ಯಾಕೆ ಕೊಲೆ ಮಾಡಿದ್ರು? ಇದು ಹಳೇ ದ್ವೇಷಕ್ಕಾ, ವ್ಯವಹಾರಕ್ಕೆ ಸಂಬಂಧಪಟ್ಟಿದ್ದಾ? ಅಥವಾ ಅನೈತಿಕ ಸಂಬಂಧಕ್ಕೆ ಕೊಲೆ ಮಾಡಿದ್ದಾರಾ ಎಂಬ ಮಾಹಿತಿ ಪೊಲೀಸರ ತನಿಖೆಯಿಂದ ತಿಳಿದು ಬರಬೇಕಿದೆ.
ವರದಿ: ವಿನಯ ರೆಡ್ಡಿ, ಕ್ರೈಂ ಬ್ಯುರೋ ಪಬ್ಲಿಕ್ ನೆಕ್ಸ್ಟ್
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
27/12/2024 11:25 am