ಮಂಗಳೂರು: ಶತ ಚಂಡಿಕಾಯಾಗದ ಪ್ರಯುಕ್ತ ಹಸಿರು ಹೊರೆ ಕಾಣಿಕೆ ಬೃಹತ್ ಶೋಭಾಯಾತ್ರೆ ಬೀರಿ ಶ್ರೀ ಗಣೇಶ ಮಂದಿರದ ವಠಾರದಿಂದ ಶ್ರೀ ಕ್ಷೇತ್ರದವರರೆಗೆ ನಡೆಯಿತು.
ಸೋಮೇಶ್ವರ ಶ್ರೀ ಸೋಮನಾಥ ದೇವಸ್ಥಾನದ ಪ್ರಧಾನ ಅರ್ಚಕ ಸೂರ್ಯನಾರಾಯಣ ಹೊಳ್ಳ ಚಾಲನೆ ನೀಡಿದರು. ಕೊಲ್ಯ ಶ್ರೀ ನಾಗಬ್ರಹ್ಮ ಅನ್ನಪೂರ್ಣೇಶ್ವರಿ ಕ್ಷೇತ್ರದ ಧರ್ಮದರ್ಶಿ ಭಾಸ್ಕರ ಐತಾಳ್, ಸೋಮೇಶ್ವರ ಶ್ರೀ ಸೋಮನಾಥ ದೇವಸ್ಥಾನ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ರವೀಂದ್ರ ನಾಥ ರೈ, ಕೊಂಡಾಣ ಶ್ರೀ ಪಿಲಿಚಾಮುಂಡಿ, ಬಂಟ, ಮುಂಡತ್ತಾಯ ದೈವಸ್ಥಾನದ ಗುರಿಕಾರ ಮುತ್ತಣ್ಣ ಶೆಟ್ಟಿ ಕೆಳಗಿನ ಕೋಟೆಕಾರುಗುತ್ತು, ಅಡ್ಕ ಶ್ರೀ ಭಗವತೀ ಕ್ಷೇತ್ರದ ಆಡಳಿತ ಮೊಕ್ತೇಸರ ರವಿ ಕಾರ್ನವರು, ಕೋಟೆಕಾರ್ ಶ್ರೀ ಕಾಳಿಕಾಂಬ ದೇವಸ್ಥಾನದ ಅಧ್ಯಕ್ಷ ಸುಂದರ ಆಚಾರ್ಯ, ಕೋಟೆಕಾರ್ ಬೀರಿ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ರಘು ಉಚ್ಚಿಲ್, ದೇವಸ್ಥಾನ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಡಾ.ಮೋಹನ್ ದಾಸ್ ರೈ ಸಾಂತ್ಯಗುತ್ತು, ಶತಚಂಡಿಕಾಯಾಗ ಸಮಿತಿಯ ಅಧ್ಯಕ್ಷ ಕೃಷ್ಣ ಶೆಟ್ಟಿ ಕೆಳಗಿನ ಕೋಟೆಕಾರುಗುತ್ತು, ಪ್ರಧಾನ ಅರ್ಚಕ ಗಣೇಶ್ ಭಟ್ ಪಂಜಾಳ ಮೊದಲಾದವರು ಉಪಸ್ಥಿತರಿದ್ದರು.
PublicNext
27/12/2024 11:44 am