ಮಂಗಳೂರು: ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ನಿಧನದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತದ ವತಿಯಿಂದ ಡಿಸೆಂಬರ್ 28 ಮತ್ತು 29ರಂದು ತಣ್ಣೀರುಬಾವಿ ಬೀಚ್‌ನಲ್ಲಿ ನಿಗದಿಯಾಗಿದ್ದ ಬೀಚ್ ಉತ್ಸವ ಮುಂದೂಡಲಾಗಿದೆ.
ಬೀಚ್ ಉತ್ಸವಕ್ಕಾಗಿ ದಕ್ಷಿಣ ಕನ್ನಡ ಜಿಲ್ಲಾಡಳಿತ ಸಕಲ ಸಿದ್ಧತೆ ನಡೆಸಿತು. ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ ನಿಧನದ ಪ್ರಯುಕ್ತ ರಾಜ್ಯಾದ್ಯಂತ ಶೋಕಾಚರಣೆ ಇರುವುದರಿಂದ ಬೀಚ್ ಉತ್ಸವ ಸದ್ಯಕ್ಕೆ ಮುಂದೂಡಲ್ಪಟ್ಟಿದೆ. ಬೀಚ್ ಉತ್ಸವದ ಮುಂದಿನ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸಲಿದೆ.
PublicNext
27/12/2024 12:49 pm