ಮಂಡ್ಯ: ಇದು ಮಹಾತ್ಮ ಗಾಂಧಿಯವರು ಕಟ್ಟಿದ ಕಾಂಗ್ರೆಸ್ ಅಲ್ಲ, ಬದಲಾಗಿ ಆಲಿ ಬಾಬಾ ಮತ್ತು 40 ಮಂದಿ ಕಳ್ಳರ ದಂಡು ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಲೇವಡಿ ಮಾಡಿದರು.
ಮಂಡ್ಯದಲ್ಲಿ ಗುರುವಾರ ದಿಶಾ ಸಭೆಗೆ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬೆಳಗಾವಿಯಲ್ಲಿ ಕಾಂಗ್ರೆಸ್‌ನಿಂದ ಗಾಂಧಿ ಶತಮಾನೋತ್ಸವ ಕಾರ್ಯಕ್ರಮ ನಡೆಯುತ್ತಿದೆ. ಮುಂದಿನ ವರ್ಷ ಗಾಂಧಿ ಹೆಸರಲ್ಲಿ ಕಾರ್ಯಕ್ರಮ ಮಾಡಲು ಸರ್ಕಾರ ಹೊರಟಿದೆ. ಕೋಟ್ಯಂತರ ರೂಪಾಯಿ ವೆಚ್ಚ ಮಾಡಿ ಗಾಂಧೀಜಿ ಶತಮಾನೋತ್ಸವ ಕಾರ್ಯಕ್ರಮ ಮಾಡುತ್ತಿದೆ ರಾಜ್ಯ ಸರಕಾರ. ಆದರೆ, ಅಲ್ಲಿ ನಡೆ ಯುತ್ತಿರುವ ಕಾರ್ಯಕ್ರಮದ ಕಟೌಟ್ ಗಳಲ್ಲಿ ಗಾಂಧೀಜಿ ಫೋಟೋ ಕಾಣೆಯಾಗಿದೆ. ಬದಲಾಗಿ ನಕಲಿ ಗಾಂಧಿಗಳ ಫೋಟೋ
ಗಳ ಕಟೌಟ್ ಗಳು ಆಕಾಶದೆತ್ತರಕ್ಕೆ ರಾರಾಜಿಸುತ್ತಿದೆ ಎಂದು ಗೇಲಿ ಮಾಡಿದರು.
ಈಗ ಇರುವುದು ಅಸಲಿ ಕಾಂಗ್ರೆಸ್ ಅಲ್ಲವೇ ಅಲ್ಲ. ನಕಲಿ ಕಾಂಗ್ರೆಸ್ ಬೆಳಗಾವಿಯಲ್ಲಿ ಕಾರ್ಯಕ್ರಮ ಮಾಡುತ್ತಿದೆ. ಸ್ವಾತಂತ್ರ್ಯ ಗಳಿಸಿದ ಮೇಲೆ ಕಾಂಗ್ರೆಸ್ ಅನ್ನು ವಿಸರ್ಜನೆ ಮಾಡಿ ಎಂದು ಸ್ವತಃ ಗಾಂಧೀಜಿ ಅವರೇ ಹೇಳಿದ್ದರು. ಅವರ ಕಾಂಗ್ರೆಸ್ ಈಗಿಲ್ಲ. ಈಗ ಇರುವುದು ಕೇವಲ ಆಲಿಬಾಬ ಮತ್ತು 40 ಮಂದಿ ಕಳ್ಳರ ದಂಡು ಎಂದು ಕುಮಾರಸ್ವಾಮಿ ಕಿಡಿಕಾರಿದರು.
ಗಾಂಧೀಜಿ ಅವರ ಹೆಸರಲ್ಲಿ ಕಾರ್ಯಕ್ರಮ ಮಾಡಲು ನನ್ನ ತಕರಾರಿಲ್ಲ. ಸಂಘಟಿತ ಹೋರಾಟದ ಮೂಲಕ ಹೋರಾಟ ನಡೆಸಿ ಸ್ವಾತಂತ್ರ್ಯ ತಂದುಕೊಟ್ಟ ಗಾಂಧೀಜಿ ಅವರ ರಾಮರಾಜ್ಯದ ಪರಿಕಲ್ಪನೆ ಇವತ್ತು ರಾಜ್ಯದಲ್ಲಿ ಸಾಕಾರವಾಗಿದೆಯಾ? ಅವರ ಗ್ರಾಮ ಸ್ವರಾಜ್ಯದ ಕನಸು ಈಡೇರಿದೆಯಾ? 15ನೇ ಹಣಕಾಸು ಆಯೋಗದ ಅನುದಾನದ ಮೂಲಕ ಗ್ರಾಮಗಳ ಅಭಿವೃದ್ಧಿಗಾಗಿ ಪಂಚಾಯಿತಿಗಳಿಗೆ ಕೇಂದ್ರ ಸರಕಾರ ಬಿಡುಗಡೆ ಮಾಡಿರುವ ₹448.29 ಕೋಟಿ ಬಳಕೆ ಮಾಡಿಲ್ಲ. ಈ ಹಣ ಬಿಡುಗಡೆಯಾಗಿ ಹಲವಾರು ತಿಂಗಳೇ ಕಳೆದಿದ್ದರೂ ಇನ್ನೂ ಪಂಚಾಯತಿಗಳಿಗೆ ಆ ಹಣ ಹೋಗಿಲ್ಲ ಎಂದು ಕೇಂದ್ರ ಸಚಿವರು ಬೇಸರ ವ್ಯಕ್ತಪಡಿಸಿದರು.
PublicNext
27/12/2024 01:17 pm