ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಾಜಿ ಪ್ರಧಾನಮಂತ್ರಿಗೆ ಶ್ರದ್ಧಾಂಜಲಿ : ಕಾಂಗ್ರೆಸ್ಸಿನಿಂದ ಗೌರವ ಸಮರ್ಪಣೆ

ಹುಬ್ಬಳ್ಳಿ : ಮಾಜಿ ಪ್ರಧಾನಮಂತ್ರಿ ಡಾ.ಮನಮೋಹನ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಮುಖಂಡರು, ದಿ.ಮನಮೋಹನ ಸಿಂಗ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಮರ್ಪಣೆ ಮಾಡುವ ಮೂಲಕ ಗೌರವ ಸಮರ್ಪಣೆ ಮಾಡಿದರು.

ಹುಬ್ಬಳ್ಳಿಯ ಕಾಂಗ್ರೆಸ್ ಕಚೇರಿಯಲ್ಲಿ ಮಾಜಿ ಪ್ರಧಾನಮಂತ್ರಿ ಮನಮೋಹನ ಸಿಂಗ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಮಾಜಿ ಪ್ರಧಾನಮಂತ್ರಿಯವರ ಕಾರ್ಯವೈಖರಿ ಹಾಗೂ ಆಡಳಿತ ಅವಧಿಯಲ್ಲಿ ಮಾಡಿದ ಸಾಧನೆಯನ್ನು ಸ್ಮರಿಸಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಅಧ್ಯಕ್ಷರುಗಳಾದ ಅಲ್ತಾಫಹುಸೇನ್ ಹಳ್ಳೂರ, ಅನೀಲಕುಮಾರ್ ಪಾಟೀಲ, ಮಾಜಿ ಸಂಸದ ಮಂಜುನಾಥ ಕುನ್ನೂರ, ಡಿ.ಎಂ.ದೊಡ್ಡಮನಿ, ಶರೀಫ್ ಗರಗದ, ಪಾಲಿಕೆ ಸದಸ್ಯರಾದ ಆರೀಫ್ ಭದ್ರಾಪೂರ, ವಾದಿರಾಜ್ ಕುಲಕರ್ಣಿ ಸೇರಿದಂತೆ ಕಾಂಗ್ರೆಸ್ ಮುಖಂಡರು ಭಾಗಿಯಾಗಿದ್ದರು.

Edited By : Nirmala Aralikatti
Kshetra Samachara

Kshetra Samachara

27/12/2024 01:28 pm

Cinque Terre

36.73 K

Cinque Terre

0

ಸಂಬಂಧಿತ ಸುದ್ದಿ