ಹಾವೇರಿ: ಅನೈತಿಕ ಸಂಬಂಧ ಹಿನ್ನೆಲೆ ಮನಬಂದಂತೆ ಥಳಿತಕ್ಕೆ ಒಳಗಾಗಿದ್ದ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಕೊಪ್ಪರಸಿಕೊಪ್ಪ ಗ್ರಾಮದಲ್ಲಿ ನಡೆದಿದೆ.
ಮೃತನನ್ನ ಪ್ರಕಾಶ್ ಓಲೇಕಾರ ಎಂದು ಗುರುತಿಸಲಾಗಿದೆ. ಆರೋಪಿಗಳು ಪ್ರಕಾಶನನ್ನು ಲೈಟ್ ಕಂಬಕ್ಕೆ ಕಟ್ಟಿ ಮನಬಂದಂಗೆ ಥಳಿಸಿದ್ದಾರೆ. ಅಲ್ಲದೆ ಪ್ರಕಾಶ ಕೊರಳಿಗೆ ಚಪ್ಪಲಿ ಹಾರ ಹಾಕಿ, ಕಾಲಿಗೆ ಬೆಂಕಿ ಹಚ್ಚಿ ವಿಕೃತಿ ಮೆರೆದಿದ್ದಾರೆ.
ಅನೈತಿಕ ಸಂಬಂಧದ ಅನುಮಾನದಿಂದ ಪ್ರಕಾಶನ ಜೊತೆ ಆರೋಪಿಗಳು ಈ ರೀತಿ ವರ್ತಿಸಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಪ್ರಕಾಶ ಓಲೇಕಾರ್ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಈ ಕುರಿತಂತೆ ಹಾನಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
PublicNext
27/12/2024 01:36 pm