ಬೆಳಗಾವಿ: ಬೆಳಗಾವಿಯಲ್ಲಿ ಇಂದು ಆಯೋಜಿಸಿದ್ದ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಹಲವಾರು ರಾಷ್ಟ್ರೀಯ ನಾಯಕರು, ವಿವಿಧ ರಾಜ್ಯಗಳ ಸಂಸದರು ಸೇರಿ ಕಾರ್ಯಕಾರಿ ಸದಸ್ಯರು ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬಸ್ ನಲ್ಲಿ ಆಗಮಿಸಿ, ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.
ಮನಮೋಹನ್ ಸಿಂಗ್ ನಿಧನರಾದ ಸುದ್ದಿ ತಿಳಿಯುತ್ತಿದ್ದಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ದಿಢೀರ್ ದೆಹಲಿಗೆ ತೆರಳಿದ್ದರು. ಇಂದು ಬೆಳಗಾವಿ ಸಿಪಿಇಡ್ ಮೈದಾನದಲ್ಲಿ ಅಗಲಿದ ಮಾಜಿ ಪ್ರಧಾನಮಂತ್ರಿಗಳಿಗೆ ಶ್ರದ್ಧಾಂಜಲಿ ಸಲ್ಲಿಸಿದ ಬಳಿಕ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿ ರಾಜ್ಯದ ಅನೇಕ ನಾಯಕರು ದೆಹಲಿಗೆ ತೆರಳಲಿದ್ದಾರೆ.
PublicNext
27/12/2024 02:04 pm