ಮೊಳಕಾಲ್ಮುರು:ವಿಧಾನಸಭಾ ಕ್ಷೇತ್ರದ ಅಬ್ಬೇನಹಳ್ಳಿ ಗ್ರಾಪಂ ವ್ಯಾಪ್ತಿಯ ಜಿನಿಗಿಹಳ್ಳದಲ್ಲಿ ಉದ್ಯೋಗ ಖಾತ್ರಿ ಯೋಜನೆಯ ಕೂಲಿ ಕಾರ್ಮಿಕರು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ರವರಿಗೆ ಸಂತಾಪ ಸೂಚಿಸಿದರು.
ಈ ವೇಳೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪಾಪಮ್ಮ ಆನಂದಪ್ಪ ಮಾತನಾಡಿ 1990 ರಲ್ಲಿ ಆರ್ಥಿಕ ಸುಧಾರಣೆಗಳು, ಉದಾರೀಕರಣ ನೀತಿಗಳನ್ನು ಜಾರಿಗೆ ತರುವ ಮೂಲಕ ಭಾರತದ ಅರ್ಥ ವ್ಯವಸ್ಥೆಗೆ ಮನಮೋಹನ್ ಸಿಂಗ್ ಹೊಸ ದಿಕ್ಕು ತೋರಿಸಿದ್ದರ ಕೀರ್ತಿ ಮನಮೋಹನ್ ಸಿಂಗ್ ಅವರಿಗೆ ಸಲ್ಲುತ್ತದೆ.
ಮನಮೋಹನ್ ಸಿಂಗ್ ಅವರ ಮಹತ್ವಾಕಾಂಕ್ಷಿ ಯೋಜನೆಗಳ ಪೈಕಿ ಈ ಯೋಜನೆ ಕೂಡಾ ಒಂದಾಗಿದೆ. ಬಡವರಿಗೆ ಜೀವನಾಧಾರ ಕಲ್ಪಿಸಲು ಮತ್ತು ಗ್ರಾಮೀಣ ಜನತೆಗೆ ವರ್ಷಕ್ಕೆ ಕನಿಷ್ಠ 100 ದಿನಗಳ ಉದ್ಯೋಗ ಕಲ್ಪಿಸುವ ಉದ್ದೇಶದಿಂದ ಸರ್ಕಾರ ನರೇಗಾ ಯೋಜನೆಯನ್ನು ಜಾರಿಗೆ ತಂದಿತು. ಇಂದು ಲಕ್ಷಾಂತರ ಮಂದಿ ಈ ಯೋಜನೆ ಫಲಾನುಭವಿಗಳಾಗಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಅನಿತಮ್ಮ ಜಯಣ್ಣ ಸದಸ್ಯರಾದ ಪಡ್ಲಾಬೊರಯ್ಯ, ಶೇಖರಗೌಡ,ಕವಿತಾ,ಕುಬೇರಪ್ಪ ಸೇರಿದಂತೆ ಕೂಲಿ ಕಾರ್ಮಿಕರು ಇದ್ದರು
Kshetra Samachara
27/12/2024 02:11 pm