ಚಿತ್ರದುರ್ಗ: ಕಲ್ಲಿನಕೋಟೆ ಚಿತ್ರದುರ್ಗ ಜಿಲ್ಲೆಯ ಇಂಗಳದಾಳ್ ಗ್ರಾಮದಲ್ಲಿ ಎರಡು ದಶಕಗಳ ಬಳಿಕ ಮತ್ತೆ ಗಣಿಗಾರಿಕೆ ಆರಂಭವಾಗಲಿದೆ. ಈ ಕುರಿತು ಕೇಂದ್ರ ಕಲ್ಲಿದ್ದಲು ಮತ್ತು ಗಣಿಗಾರಿಕೆ ಸಚಿವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಚಿತ್ರದುರ್ಗ ತಾಲೂಕಿನ ಇಂಗಳದಾಳ್‌ನಲ್ಲಿ ಗಣಿಗಾರಿಕೆ ಪುನರಾರಂಭಿಸುವಂತೆ ಶಾಸಕ ಕೆ ಸಿ ವೀರೇಂದ್ರ ಪಪ್ಪಿ ಮಾಡಿದ್ದ ಮನವಿಗೆ ಕೇಂದ್ರ ಕಲ್ಲಿದ್ದಲು ಮತ್ತು ಗಣಿಗಾರಿಕೆ ಸಚಿವ ಜಿ. ಕಿಶನ್ ರೆಡ್ಡಿ ಸ್ಪಂದಿಸಿದ್ದಾರೆ. ಚಿನ್ನದ ಗಣಿಗಾರಿಕೆ ಘಟಕ ಪುನರಾರಂಭಿಸಲು ನಿಯಮಾನುಸಾರ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಶಾಸಕ ಕೆ ಸಿ ವೀರೇಂದ್ರ ಪಪ್ಪಿ ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆಗಳ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಅವರಿಗೆ ಸೆಪ್ಟೆಂಬರ್ 9 ರಂದು ಮನವಿ ಮಾಡಿದ್ದರು. ಗಣಿ ತಜ್ಞರು ಮತ್ತು ಭೂವಿಜ್ಞಾನಿಗಳು ಅಜ್ಜನಹಳ್ಳಿ ಮತ್ತು ಜಿ.ಆರ್. ಹಳ್ಳಿ ಸುತ್ತಮುತ್ತ ಉತ್ತಮ ಪ್ರಮಾಣದಲ್ಲಿ ಚಿನ್ನದ ನಿಕ್ಷೇಪವಿದ್ದು, ಚಿನ್ನದ ಗಣಿಗಾರಿಕೆಗೆ ಸೂಕ್ತವಾಗಿದೆ ಎಂಬುದಾಗಿ ತಿಳಿಸಿದ್ದು, ಈ ಕುರಿತಂತೆ ಸಂಬಂಧಪಟ್ಟವರಿಂದ ಮತ್ತೊಮ್ಮೆ ಪರಿಶೀಲನೆ ನಡೆಸಿ, ಚಿತ್ರದುರ್ಗದ ಚಿನ್ನದ ಗಣಿಗಾರಿಕೆ ಘಟಕವನ್ನು ಮತ್ತೆ ಆರಂಭಿಸಬೇಕು ಎಂಬುದಾಗಿ ಮನವಿ ಮಾಡಿದ್ದರು.
PublicNext
27/12/2024 03:50 pm