ಹೊಸದುರ್ಗ: ಮಕ್ಕಳನ್ನು ರಾಷ್ಟ್ರದ ಸಂಪತ್ತಾಗಿಸಲು ಶಿಕಣ ಅಗತ್ಯಶಿಕ್ಷಕರು, ಪೋಪಕರು ಮಕ್ಕಳಿಗೆ ಶಿಕ್ಷಣ ಕೊಡಿಸುವಲ್ಲಿ ಹೆಚ್ಚಿನ ಜವಾಬ್ದಾರಿಯನ್ನು ವಹಿಸಿಬೇಕೆಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಎನ್.ಸುನಿಲ್ ಕುಮಾರ್ ತಿಳಿಸಿದರು.
ಅವರು ಮತ್ತೋಡು ಹೋಬಳಿ ಕಾರೇಹಳ್ಳಿ ಗ್ರಾಮ ಪಂಚಾಯತಿ ವತಿಯಿಂದ ಕನ್ನಡ ರಾಜ್ಯೋತ್ಸವ ಹಾಗೂ ಮಹಿಳಾ ಮತ್ತು ಮಕ್ಕಳ ವಿಶೇಷ ಗ್ರಾಮ ಸಭೆಯಲ್ಲಿ ಶಾಲಾ ಮಕ್ಕಳಿಗೆ 2024 -25 ನೇ ಸಾಲಿನ 15 ನೇ ಹಣಕಾಸು ಯೋಜನೆ ಅಡಿಯಲ್ಲಿ ಶಾಲಾ ಮಕ್ಕಳಿಗೆ ಕ್ರೀಡಾ ಸಾಮಗ್ರಿಗಳನ್ನು ವಿತರಿಸಿ ಮಾತನಾಡಿದರು, ಇಂದಿನ ಸ್ಪರ್ಧಾ ಜಗತ್ತಿನಲ್ಲಿ ಮಕ್ಕಳಿಗೆ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆ ನಡೆಸಬೇಕು ಹಾಗೇ ಗ್ರಾಮ ಪಂಚಾಯಿತಿ ಗ್ರಂಥಾಲಯ, ಪೋಸ್ಟ್ ಆಫೀಸ್, ಬ್ಯಾಂಕ್ , ಆಸ್ಪತ್ರೆಗಳ ಪರಿಚಯ ಮಾಡಿ ಕೊಡುವ ಮೂಲಕ ಮಕ್ಕಳಿಗೆ ಅಗತ್ಯ ಸೌಲಭ್ಯಗಳನ್ನು ನೀಡಲು ಪಂಚಾಯಿತಿ ಸಹಕಾರ ನೀಡುವುದು ಎಂದರು.
ಮಹಿಳೆಯರಿಗೆ ಪಂಚಾಯಿತಿ ಯಿಂದ ಸಿಗಬಹುದಾದ ಎಲ್ಲಾ ಸೌಲಭ್ಯಗಳನ್ನು ನೀಡಲಾಗುವುದು ಅವುಗಳನ್ನು ಬಳಸಿ ಕೊಂಡು ಆರ್ಥಿಕವಾಗಿ ಸಬಲರಾಗಬೇಕೆಂದು ತಿಳಿಸಿದರು.
Kshetra Samachara
27/12/2024 03:55 pm