ನವದೆಹಲಿ: ನಿನ್ನೆ ನಿಧನರಾದ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ಪಾರ್ಥಿವ ಶರೀರಕ್ಕೆ ಅವರ ನಿವಾಸದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ಮೋದಿ, ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಸೇರಿದಂತೆ ಹಲವು ಗಣ್ಯರು ಶುಕ್ರವಾರ ಅಂತಿಮ ನಮನ ಸಲ್ಲಿಸಿದರು.
ಅಮೆರಿಕದಲ್ಲಿರುವ ಮನ ಮೋಹನ್ ಸಿಂಗ್ ಅವರ ಮಗಳಿಗಾಗಿ ಕುಟುಂಬ ಕಾಯುತ್ತಿದ್ದು, ಅವರು ಬಂದ ನಂತರ ನಾಳೆ ಪಾರ್ಥಿವ ಶರೀರದ ಅಂತ್ಯಕ್ರಿಯೆ ನಡೆಯಲಿದೆ. ಅಲ್ಲಿಯವರೆಗೂ ಅವರ ನವದೆಹಲಿಯ ನಿವಾಸದಲ್ಲಿಯೇ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ನಾಳೆ ಬೆಳಗ್ಗೆ 8 ಗಂಟೆಗೆ ಕಾಂಗ್ರೆಸ್ ಕೇಂದ್ರ ಕಚೇರಿಗೆ ಪಾರ್ಥಿವ ಶರೀರವನ್ನು ತರಲಾಗುತ್ತಿದೆ. ಅಲ್ಲಿ ಬೆಳಗ್ಗೆ 8-30 ರಿಂದ 9-30ರವರೆಗೂ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಅಲ್ಲಿಂದ ಬೆಳಗ್ಗೆ 9-30ಕ್ಕೆ ಅಂತಿಮ ಯಾತ್ರೆ ಶುರುವಾಗಲಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ. ಸಿ. ವೇಣುಗೋಪಾಲ್ ತಿಳಿಸಿದ್ದಾರೆ.
PublicNext
27/12/2024 04:28 pm