ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ ಬ್ರೇಕಿಂಗ್ : ಸಿಲಿಂಡರ್ ಸ್ಫೋಟ - ಚಿಕಿತ್ಸೆ ಫಲಿಸದೇ ಮತ್ತೊಬ್ಬ ಮಾಲಾಧಾರಿ ಸಾವು, ಸಾವಿನ ಸಂಖ್ಯೆ 4ಕ್ಕೇರಿಕೆ

ಹುಬ್ಬಳ್ಳಿ: ಸಿಲಿಂಡರ್ ಸ್ಪೋಟದಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಅಯ್ಯಪ್ಪ ಮಾಲಾಧಾರಿಗಳ ಪೈಕಿ ಇಂದು ಸಾಯಂಕಾಲ ಮತ್ತೊಬ್ಬ ಅಯ್ಯಪ್ಪ ಮಾಲಾಧಾರಿ ಚಿಕಿತ್ಸೆ ಫಲಕಾರಿಯಾಗದೆ ಕಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಉಣಕಲ್‌ನಲ್ಲಿ ರವಿವಾರ ನಡು ರಾತ್ರಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ 9 ಜನರು ಗಂಭೀರವಾಗಿ ಗಾಯಗೊಂಡಿದ್ದರು. ಈ ಪೈಕಿ ಗುರುವಾರ ಬೆಳಗಿನ ಜಾವ ಸಂಜಯ ಹಾಗೂ ನಿಜಲಿಂಗಪ್ಪ ಎಂಬ ಇಬ್ಬರು ಚಿಕಿತ್ಸೆ ಫಲಕಾರಿಯಾಗದೆ ಕಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಇಂದು ಬೆಳ್ಳಿಗ್ಗೆ 8 ಗಂಟೆಗೆ ರಾಜು ಮೂಗೇರಿ ಎಂಬಾತ ಕೂಡ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದರು.

ಆದ್ರೆ ಸಾವಿನ ಮೃದಂಗ ಮರೆಯುವ ಮುನ್ನವೇ ಇದೀಗ ಮತ್ತೊಬ್ಬ ಅಯ್ಯಪ್ಪ ಮಾಲಾಧಾರಿ ಲಿಂಗರಾಜ ಬೀರನೂರ ಚಿಕಿತ್ಸೆ ಫಲಕಾರಿಯಾಗದೆ ಸಾಯಂಕಾಲ ನಾಲ್ಕು ಗಂಟೆಯ ಸುಮಾರಿಗೆ ಮೃತಪಟ್ಟಿದ್ದಾನೆ..ಇದೀಗ ಸಾವಿನ ಸಂಖ್ಯೆ 4ಕ್ಕೆ ಏರಿಕೆಯಾಗಿದೆ. ಇನ್ನುಳಿದ 5 ಜನರಿಗೆ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.

-ವಿನಯ ರೆಡ್ಡಿ ಕ್ರೈಂ ಬ್ಯುರೋ ಪಬ್ಲಿಕ್ ನೆಕ್ಸ್ಟ್

Edited By : Shivu K
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

27/12/2024 04:53 pm

Cinque Terre

59.83 K

Cinque Terre

3

ಸಂಬಂಧಿತ ಸುದ್ದಿ