ನವಲಗುಂದ: ಕಾಂಗ್ರೆಸ್ ನಾಯಕ, ದೇಶ ಕಂಡ ಸರ್ವ ಶ್ರೇಷ್ಠ ಆರ್ಥಿಕ ತಜ್ಞ, ಹಿರಿಯ ರಾಜಕಾರಣಿ ಮಾಜಿ ಪ್ರಧಾನಮಂತ್ರಿ ಡಾ: ಮನಮೋಹನ್ ಸಿಂಗ್ ಅವರ ನಿಧನದಿಂದ ದೇಶ ಬಡವಾಗಿದ್ದು ತೀವ್ರ ಸಂತಾಪ ವ್ಯಕ್ತಪಡಿಸಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚಣೆ ಮಾಡಿ ಗೌರವ ಸಮರ್ಪಿಸಿದ ಶಾಸಕ ಎನ್.ಹೆಚ್.ಕೋನರಡ್ಡಿ.
ನಗರದ ಬ್ಲಾಕ್ ಕಾಂಗ್ರೇಸ್ ಕಚೇರಿಯಲ್ಲಿ ಸಂತಾಪ ಸಭೆಯಲ್ಲಿ ಭಾಗವಹಿಸಿದ ಮಾತನಾಡಿದ ಅವರು, ಡಾ: ಮನಮೋಹನ್ ಸಿಂಗ್ ಅವರು ದೇಶದ ಆರ್ಥಿಕ ಸುಧಾರಣೆಗಳ ದಿಟ್ಟ ಹೆಜ್ಜೆ ಕೈಗೊಂಡು, ಆಧುನಿಕ ಭಾರತದ ಆರ್ಥಿಕತೆಯ ರೂವಾರಿ ಎನಿಸಿಕೊಂಡಿದ್ದರು, 1991ರ ಅಕ್ಟೋಬರನಲ್ಲಿ ಮೊದಲ ಬಾರಿಗೆ ರಾಜ್ಯಸಭೆ ಪ್ರವೇಶಿಸಿದ್ದ ಅವರು ಹಣಕಾಸು ಸಚಿವರಾಗಿದ್ದರು.
ಅವರು ಆಗ ಮಾಡಿದ ಆರ್ಥಿಕ ಸುಧಾರಣೆಗಳಿಗೆ ಈಗಲೂ ವಿಶ್ವದಾದ್ಯಂತ ಮನ್ನಣೆ ಇದೆ. ಜನರ ದೃಷ್ಟಿಕೋನದಿಂದ ನೋಡುವುದಾದರೆ ಭಾರತದ ಅಂದಿನ ದಿನಗಳು ಡಾ. ಸಿಂಗ್ ಅವರ ವ್ಯಕ್ತಿತ್ವವನ್ನು ಬಿಂಬಿಸುತ್ತವೆ. ಅವರ ಸಾಮಾಜಿಕ ಕ್ಷೇತ್ರದ ತಮ್ಮ ಅದ್ವಿತೀಯ ಸಾಧನೆಗಾಗಿ ಹತ್ತು ಹಲವು ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ. ಬಳಿಕ 2004 ರಿಂದ 2014ರವರೆಗೆ ದೇಶದ ಪ್ರಧಾನಿಯಾಗಿದ್ದಾಗ ಭಾರತೀಯ ನಾಗರೀಕರಿಗೆ ವಿಶಿಷ್ಠ ಗುರುತಿನ ಚೀಟಿ ಆಧಾರ ಕಾರ್ಡ ಪರಿಚಯಿಸಿದರು, ಗ್ರಾಮೀಣ ಭಾಗದ ಜನತೆಗೆ ಉದ್ಯೋಗ ದೊರಕಿಸುವುದಕ್ಕಾಗಿ ಮಹಾತ್ಮಾಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಜಾರಿಗೆ ತಂದರು, ಪ್ರಥಮ ಬಾರಿಗೆ ದೇಶದ ರೈತರ ರಾಷ್ಟ್ರೀಕೃತ ಬ್ಯಾಂಕಗಳಲ್ಲಿನ ಸಾಲ ಮನ್ನಾ ಮಾಡಿ ಇತಿಹಾಸಕ್ಕೆ ಸೇರ್ಪಡೆಯಾದರು.
ಅವರ ನಿಧನದಿಂದ ಬೆಳಗಾವಿಯಲ್ಲಿ ನಡೆಯುವ ಗಾಂಧಿ ಭಾರತ ಬೃಹತ್ ಸಮಾವೇಶವನ್ನು ರದ್ದುಮಾಡಿ ಮತ್ತೊಬ್ಬ ಗಾಂಧಿಯ ಭಾವಪೂರ್ವ ಶ್ರದ್ಧಾಂಜಲಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಸೇರಿದಂತೆ ಬೆಳಗಾವಿಯಲ್ಲಿ ನಡೆಸಲಾಯಿತು.
ಡಾ: ಮನಮೋಹನ್ ಸಿಂಗ್ ಅವರ ಅಗಲಿಕೆಯಿಂದ ದೇಶಕ್ಕೆ ತುಂಬಲಾರದ ಹಾನಿಯಾಗಿದೆ. ಸರಳ ಸ್ವಭಾವದ, ಅತೀ ಸೌಮ್ಯ ವ್ಯಕ್ತಿತ್ವದ ಮಹಾನ ನಾಯಕರಾದ ಡಾ: ಸಿಂಗ್ ಅವರು ಈ ದೇಶ ಕಂಡ ಅಪರೂಪದ ರಜಕಾರಣಿ, ಪಕ್ಷಾತೀತವಾಗಿ ಎಲ್ಲರ ಪ್ರೀತಿಗೆ ಭಾಜನರಾಗಿದ್ದು. ಅವರ ಅಗಲಿಕೆಯಿಂದ ಕುಟುಂಬದ ಸದಸ್ಯರಿಗೆ ಹಾಗೂ ಅವರ ಅಪಾರ ಅಭಿಮಾನಿಗಳಿಗೆ ಆ ದೇವರು ದುಃಖ ತಡೆಯುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದರು.
Kshetra Samachara
27/12/2024 05:01 pm