ಚಿತ್ರದುರ್ಗ: ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ ಡಿ.29ರಂದು ನಗರದ 25 ಕೇಂದ್ರಗಳಲ್ಲಿ ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳ ಮರು ಪರೀಕ್ಷೆ ನಡೆಯಲಿದೆ.
ಪರೀಕ್ಷಾ ಅವ್ಯವಹಾರಗಳನ್ನು ತಡೆಗಟ್ಟಲು ಪರೀಕ್ಷಾ ಕೇಂದ್ರಗಳ ಸುತ್ತಲೂ 200ಮೀ ಪ್ರದೇಶದಲ್ಲಿ ಸಿ.ಆರ್.ಪಿ.ಸಿ ಕಲಂ 144 ಸೆಕ್ಷನ್ ಅಡಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಆದೇಶಿಸಿದ್ದಾರೆ. ಡಿ.29 ರಂದು ಬೆಳಿಗ್ಗೆ 9 ರಿಂದ ಸಂಜೆ 5ರವರೆಗೆ ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿನ ಜೆರಾಕ್ಸ್ ಅಂಗಡಿ ಹಾಗೂ ಕಂಪ್ಯೂಟರ್ ಇಂಟರ್‌ನೆಟ್ ಕೇಂದ್ರಗಳನ್ನು ಮುಚ್ಚುವಂತೆ ಮತ್ತು ಪರೀಕ್ಷಾ ಕೇಂದ್ರಗಳಿಗೆ ಅಭ್ಯರ್ಥಿಗಳು ಯಾವುದೇ ಕಾರಣಕ್ಕೂ ಮೊಬೈಲ್ ಫೋನ್ , ಇಲೆಕ್ಟ್ರಾನಿಕ್ ಉಪಕರಣಗಳನ್ನು ತರದಂತೆ ಪ್ರಕಟಣೆಯಲ್ಲಿ ಸೂಚಿಸಲಾಗಿದೆ.
Kshetra Samachara
27/12/2024 05:09 pm