ನವದೆಹಲಿ : ವಿಶ್ವದ ಶ್ರೇಷ್ಠ ಆರ್ಥಿಕ ತಜ್ಞ, ಭಾರತದ ಮಾಜಿ ಪ್ರಧಾನಿ ವಮನಮೋಹನ್ ಸಿಂಗ್ ( 92) ಅವರು ಕೊನೆಯುಸಿರೆಳೆದಿದ್ದಾರೆ.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ದೆಹಲಿ ಏಮ್ಸ್ ಆಸ್ಪತ್ರೆಗೆ ಗುರುವಾರ ರಾತ್ರಿ ದಾಖಲಿಸಲಾಗಿತ್ತು. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಮನಮೋಹನ್ ಸಿಂಗ್ ಕೊನೆಯುಸಿರೆಳೆದಿದ್ದಾರೆ. ಆಸ್ಪತ್ರೆಗೆ ಸೇರಿಸುವಾಗಲೇ ಅವರ ಸ್ಥಿತಿ ಚಿಂತಾಜನಕವಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಸದ್ಯ ಮನಮೋಹನ್ ಸಿಂಗ್ ಅವರ ಪಾರ್ಥೀವ ಶರೀರ ದೆಹಲಿಯ ಅವರ ನಿವಾಸದಲ್ಲಿದ್ದು, ಗಣ್ಯಾತಿಗಣ್ಯರು ಸಿಂಗ್ ಅವರ ಅಂತಿಮ ದರ್ಶನ ಪಡೆಯುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಕೂಡ ಮನಮೋಹನ್ ಸಿಂಗ್ ಅವರ ನಿವಾಸಕ್ಕೆ ಬಂದು ಅಂತಿಮ ದರ್ಶನ ಪಡೆದರು. ಸಿಂಗ್ ಅವರ ಪಾರ್ಥೀವ ಶರೀರಕ್ಕೆ ನಮಿಸಿದ ನರೇಂದ್ರ ಮೋದಿ ನಂತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಪ್ರಧಾನಿ ನರೇಂದ್ರ ಮೋದಿ ಅವರ ಜೊತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕೂಡ ಆಗಮಿಸಿ ಮನಮೋಹನ್ ಸಿಂಗ್ ಅವರಿಗೆ ಅಂತಿಮ ನಮನ ಸಲ್ಲಿಸಿದರು. ಇವರ ಜೊತೆಗೆ ಕೇಂದ್ರ ಸಚಿವ ಜೆಪಿ ನಡ್ಡಾ ಸಹಿತ ಇತರ ಬಿಜೆಪಿ ನಾಯಕರು ಸಿಂಗ್ ಸ್ವಗೃಹಕ್ಕೆ ಬಂದು ಪಾರ್ಥೀವ ಶರೀರಕ್ಕೆ ಗೌರವ ಸಲ್ಲಿಸಿದರು.
ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರು ಪಶ್ಚಿಮ್ ಪಂಜಾಬ್‌ನಲ್ಲಿ ಸೆಪ್ಟೆಂಬರ್ 26, 1932ರಂದು ಜನಿಸಿದರು. ಭಾರತೀಯ ಅರ್ಥಶಾಸ್ತ್ರಜ್ಞ ಮತ್ತು ರಾಜಕಾರಣಿಯಾಗಿ ಮನಮೋಹನ್ ಸಿಂಗ್ 2004ರಿಂದ 2014ರ ವರೆಗೆ ಭಾರತದ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದರು. ಏಕೈಕ ಅಲ್ಪಸಂಖ್ಯಾತರೊಬ್ಬರು ಅಂದ್ರೆ ಸಿಖ್ ಸಮುದಾಯದವರು ಪ್ರಧಾನಮಂತ್ರಿಯಾಗಿರೋ ಕೀರ್ತಿ ಮನಮೋಹನ್ ಸಿಂಗ್ ಅವರಿಗೆ ಸಲ್ಲುತ್ತದೆ.
ಮನಮೋಹನ್ ಸಿಂಗ್ ಅವರು ಚಂಡೀಗಢದ ವಿಶ್ವವಿದ್ಯಾಲಯ ಮತ್ತು ಗ್ರೇಟ್ ಬ್ರಿಟನ್ ಕೇಂಬ್ರಿಡ್ಜ್ ವಿಶ್ವವಿದ್ಯಾಲಯದಲ್ಲಿ ವ್ಯಾಂಸಗ ಮಾಡಿದ್ರು. ನಂತರ ಅವರು ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದಿಂದ ಅರ್ಥಶಾಸ್ತ್ರದಲ್ಲಿ ಡಾಕ್ಟರೇಟ್ ಪಡೆದರು. 1970 ರ ದಶಕದಲ್ಲಿ ಅವರು ಭಾರತ ಸರ್ಕಾರದ ಆರ್ಥಿಕ ಸಲಹಾ ಹುದ್ದೆಗಳ ಸರಣಿಗೆ ಹೆಸರುವಾಸಿಯಾಗಿದ್ದರು. ಮನಮೋಹನ್ ಸಿಂಗ್ ಭಾರತೀಯ ರಿಸರ್ವ್ ಬ್ಯಾಂಕ್ ನಿರ್ದೇಶಕರಾಗಿ (1976–80) ಹಾಗೂ ಆರ್‌ಬಿಐ ಗವರ್ನರ್ (1982–85) ಸೇವೆ ಸಲ್ಲಿಸಿದ್ದಾರೆ.
ನಾಳೆ ಡಾ.ಮನಮೋಹನ್ ಸಿಂಗ್ ಅವರ ಅಂತಿಮ ದರ್ಶನ ಕೆಪಿಸಿಸಿ ಕಚೇರಿಯಲ್ಲಿ ನಡೆಯಲಿದ್ದು, ನಂತರ ದೆಹಲಿಯಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ.
PublicNext
27/12/2024 05:17 pm