ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಂತಿಮ‌ ಮತದಾರರ ಪಟ್ಟಿ ಪ್ರಕಟಿಸಲು ಸಿದ್ದತೆ ಮಾಡಿಕೊಳ್ಳಲು ಚುನಾವಣಾ ವೀಕ್ಷಕರ ಸೂಚನೆ

ಶಿವಮೊಗ್ಗ : ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ 2025 ಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಅಂತಿಮ ಮತದಾರರ ಪಟ್ಟಿ ಪ್ರಕಟಿಸಲು ಅಗತ್ಯವಾದ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಶಿವಮೊಗ್ಗ ಜಿಲ್ಲೆಯ ಮತದಾರರ ಪಟ್ಟಿಯ ವೀಕ್ಷಕರಾದ ಡಾ.ಕೆ.ವಿ.ತ್ರಿಲೋಕ್ ಚಂದ್ರ ಚುನಾವಣಾ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಲಾಗಿದ್ದ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ 2025 ಕ್ಕೆ ಕುರಿತಾದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಜಿಲ್ಲೆಯಲ್ಲಿ ಚುನಾವಣಾ ಜನಸಂಖ್ಯೆ ಅನುಪಾತ (ಇಪಿ ರೇಷಿಯೋ)ವನ್ನು ತಗ್ಗಿಸಲು ಹಾಗೂ ಯುವ ಮತದಾರರ ನೋಂದಣಿ ಹೆಚ್ಚಿಸಲು ಪಾರ್ಟ್ ವಾರು ಅಗತ್ಯವಾದ ಕ್ರಮ ಕೈಗೊಳ್ಳಬೇಕು ಎಂದರು. ಇಪಿ ರೇಷಿಯೋ ಜಿಲ್ಲೆಯಲ್ಲಿ 78.84 ಇದೆ. ಇದು ರಾಜ್ಯ ಸರಾಸರಿಗಿಂತ ಹೆಚ್ಚಿದೆ‌ ಆದ್ದರಿಂದ ಎಲ್ಲ ಕ್ಷೇತ್ರವಾರು ಮತ್ತು ಪಾರ್ಟ್ ವಾರು ಅಗತ್ಯವಾದ ವಿಶ್ಲೇಷಣೆ ನಡೆಸಿ ಹಾಗೂ ಇ-ಜನ್ಮ ಪೋರ್ಟಲ್‌ನಿಂದ ಮಾಹಿತಿ ಪಡೆದು ಕಡಿಮೆ ಮಾಡಬೇಕು. ಇದೇ ರೀತಿ ಪಾರ್ಟ್ ವಾರು ವಿಶ್ಲೇಷಣೆ ಮಾಡಿ ಯುವ ಮತದಾರರ ನೋಂದಣಿಯನ್ನು ಹೆಚ್ಚಿಸಬೇಕು. ಕೆಲವೆಡೆ 20 ವರ್ಷ ತುಂಬಿದವರು ಇನ್ನೂ ನೋಂದಣಿಯಾಗಿಲ್ಲ. ಈ ಬಗ್ಗೆ ಕ್ರಮ ವಹಿಸಬೇಕು ಎಂದರು.

Edited By : Nirmala Aralikatti
Kshetra Samachara

Kshetra Samachara

27/12/2024 05:48 pm

Cinque Terre

980

Cinque Terre

0

ಸಂಬಂಧಿತ ಸುದ್ದಿ