ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಿರಿಯೂರು: ಸುಣ್ಣಬಣ್ಣ ಮಾಡಿಸದೆಯೇ, ಹಣ ಪಡೆದಿರುವ ಬಗ್ಗೆ ತನಿಖೆ ನಡೆಸುವಂತೆ ರೈತಸಂಘ ಒತ್ತಾಯ

ಹಿರಿಯೂರು: ತಾಲ್ಲೂಕಿನ ಆದಿವಾಲ ಗ್ರಾಮ ಪಂಚಾಯಿತಿ ಕಟ್ಟಡಕ್ಕೆ ಸುಣ್ಣಬಣ್ಣ ಮಾಡಿಸದೆಯೇ ಹಣ ಪಡೆದಿರುವ ಬಗ್ಗೆ ತನಿಖೆ ನಡೆಸುವಂತೆ ಒತ್ತಾಯಿಸಿ ರೈತಸಂಘ ಮತ್ತು ಹಸಿರುಸೇನೆ ತಾಲ್ಲೂಕು ಘಟಕದಿಂದ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗೆ ದೂರು ನೀಡಲಾಗಿದೆ.

ಆದಿವಾಲ ಗ್ರಾಮ ಪಂಚಾಯಿತಿಗೆ 2022-23 ಹಾಗೂ 2023-24 ನೇ ಸಾಲಿನ 15ನೇ ಹಣಕಾಸು ಯೋಜನೆಯ ಅನುದಾನದಲ್ಲಿ ₹3,65,710 ವೆಚ್ಚದ ಕಾಮಗಾರಿಗಳಿಗೆ ಅನುಮೋದನೆ ದೊರೆತಿದೆ. ಲೋಕೋಪಯೋಗಿ ಇಲಾಖೆ ದರಪಟ್ಟಿಯಂತೆ ನವೀಕರಣ, ಸುಣ್ಣಬಣ್ಣ ಕಾಮಗಾರಿಯ ಅಂದಾಜು ಪಟ್ಟಿ ತಯಾರಿಸಿ, ಕಾಮಗಾರಿ ನಡೆಸದೆಯೇ ಹಣ ಪಡೆದಿರುವ ಬಗ್ಗೆ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಬಂದಿವೆ.

Edited By : PublicNext Desk
Kshetra Samachara

Kshetra Samachara

27/12/2024 06:08 pm

Cinque Terre

1.32 K

Cinque Terre

0

ಸಂಬಂಧಿತ ಸುದ್ದಿ