ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು : ಹೊಸವರ್ಷದ ಪ್ರಯುಕ್ತ 'ನಮ್ಮ ಮೆಟ್ರೋ' ಸೇವಾ ಅವಧಿ ವಿಸ್ತಾರ

ಬೆಂಗಳೂರು : ಹೊಸವರ್ಷದ ಸಂಭ್ರಮಾಚರಣೆಯಲ್ಲಿ ಪಾಲ್ಗೊಳ್ಳುವವರ ಅನುಕೂಲಕ್ಕಾಗಿ ನಮ್ಮ ಮೆಟ್ರೋ ತನ್ನ ಸೇವಾ ಅವಧಿಯನ್ನು ವಿಸ್ತರಿಸಿದ್ದು, ನೇರಳೆ ಮತ್ತು ಹಸಿರು ಮಾರ್ಗಗಳಲ್ಲಿ ಕೊನೆಯ ರೈಲು ಜನವರಿ 1, 2025ರಂದು ಮುಂಜಾನೆ 2 ಗಂಟೆಗೆ ಎಲ್ಲಾ ಟರ್ಮಿನಲ್ ನಿಲ್ದಾಣಗಳಿಂದ ಹೊರಡಲಿದೆ.

ಮೆಜೆಸ್ಟಿಕ್‌ನಿಂದ ಕೊನೆಯ ರೈಲು ಎಲ್ಲಾ ನಾಲ್ಕು ದಿಕ್ಕುಗಳಿಗೆ ಮುಂಜಾನೆ 2.40ಕ್ಕೆ ಹೊರಡಲಿದೆ ಎಂದು BMRCL ತಿಳಿಸಿದೆ.

ವಿಶೇಷ ಸೂಚನೆ: ಡಿ. 31ರಂದು ರಾತ್ರಿ 11 ಗಂಟೆಯಿಂದ ಎಂಜಿ ರಸ್ತೆ ಮೆಟ್ರೋ ನಿಲ್ದಾಣದ ಪ್ರವೇಶ ಮತ್ತು ನಿರ್ಗಮನದ ದ್ವಾರಗಳನ್ನು ಮುಚ್ಚಲಾಗುತ್ತದೆ. ಹತ್ತಿರದ ಟ್ರಿನಿಟಿ ಮತ್ತು ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣಗಳಲ್ಲಿ ರೈಲುಗಳು ನಿಲ್ಲುತ್ತವೆ. ₹50ರ ಪೇಪರ್ ಟಿಕೆಟ್ ಗಳು ಮುಂಗಡವಾಗಿ ಲಭ್ಯವಿದೆ.

Edited By : Abhishek Kamoji
PublicNext

PublicNext

27/12/2024 06:14 pm

Cinque Terre

18.87 K

Cinque Terre

0

ಸಂಬಂಧಿತ ಸುದ್ದಿ