ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿಗ್ಗಾವಿ : ಡಾ. ಮನಮೋಹನಸಿಂಗ್ ನಿಧನಕ್ಕೆ ಸಂತಾಪ ಸೂಚಿಸಿದ ಶಾಸಕ ಪಠಾಣ

ಶಿಗ್ಗಾವಿ: ಭಾರತ ದೇಶದ ಆರ್ಥಿಕ ನೀತಿಯ ಹರಿಕಾರ ಮಾಜಿ ಪ್ರಧಾನಿ ಡಾ. ಮನಮೋಹನಸಿಂಗ್ ನಿಧನಕ್ಕೆ ಶಾಸಕ ಯಾಸಿರ ಅಹ್ಮದಖಾನ್ ಪಠಾಣ ತೀವ್ರ ಸಂತಾಪ ವ್ಯಕ್ತಪಡಿಸಿದರು.

ಪಟ್ಟಣದ ಡಾ. ಬಿ ಆರ್ ಅಂಬೇಡ್ಕರ ಸರ್ಕಾರಿ ಕಟ್ಟಡಗಳ ಸಂಕೀರ್ಣಗಳಲ್ಲಿರುವ ಜನ ಸಂಪರ್ಕ ಕಾರ್ಯಾಲಯಲ್ಲಿ ಮಾಜಿ ಪ್ರಧಾನಿ ಡಾ. ಮನಮೋಹನಸಿಂಗ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಸಂತಾಪ ಸೂಚಿಸಿದರು.

ಒಬ್ಬ ಶ್ರೇಷ್ಠ ಆರ್ಥಿಕ ತಜ್ಞರನ್ನು ಇವತ್ತು ನಾವು ಕಳೆದುಕೊಂಡಿದ್ದೇವೆ ಎಂದು ಕಂಬನಿ ಮಿಡಿದ ಅವರು ಮಾಜಿ ಪ್ರಧಾನಿ ಡಾ. ಮನಮೋಹನಸಿಂಗ್ ಅವರ ನಿಧನದಿಂದ ಶೋಕತಪ್ತವಾಗಿರುವ ದೇಶದ ಜನತೆಗೆ ವಿಶೇಷವಾಗಿ ಕಾಂಗ್ರೇಸ್ ಪಕ್ಷಕ್ಕೆ ಅವರ ಕುಟುಂಬ ವರ್ಗದವರಿಗೆ ದು;ಖ ಭರಿಸುವ ಶಕ್ತಿಯನ್ನು ಆ ಭಗವಂತ ನೀಡಲಿ ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದರು.

ಈ ಸಂದರ್ಭದಲ್ಲಿ ಮುಖಂಡರಾದ ಹನಮಂತಪ್ಪ ಬಾರಂಗಿ, ಮುನ್ನಾ ಬೇಸ್ತಿ ಸೇರಿದಂತೆ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಇದ್ದರು.

Edited By : Abhishek Kamoji
Kshetra Samachara

Kshetra Samachara

27/12/2024 06:25 pm

Cinque Terre

4.54 K

Cinque Terre

0