ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು : 'ದೇಶ ಆರ್ಥಿಕ ಸಂಕಷ್ಟದಲ್ಲಿದ್ದಾಗ ಮನಮೋಹನ್ ಸಿಂಗ್ ಸರಿದಾರಿಗೆ ತಂದಿದ್ದರು' - HDD

ಬೆಂಗಳೂರು : ನಮ್ಮ ದೇಶ ಆರ್ಥಿಕವಾಗಿ ಭೀಕರ ಪರಿಸ್ಥಿತಿಯಲ್ಲಿದ್ದಾಗ ಹಣಕಾಸು ಸಚಿವರಾಗಿ ಬಂದ ಡಾ.ಮನಮೋಹನ್ ಸಿಂಗ್ ಅವರು ಸಮರ್ಥವಾಗಿ ಕೆಲಸ ಮಾಡಿದರು ಹಾಗೂ ಅರ್ಥ ವ್ಯವಸ್ಥೆಯನ್ನು ಸರಿದಾರಿಗೆ ತಂದರು ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಬಣ್ಣಿಸಿದರು.

ಜೆಡಿಎಸ್ ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಮನಮೋಹನ್ ಸಿಂಗ್ ಅವರ ಶ್ರದ್ಧಾಂಜಲಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿ ಅವರು,ಇದು ಅತ್ಯಂತ ದುಃಖದ ದಿನ. ಅವರ ನಿಧನ ನನಗೆ ಬಹಳ ನೋವುಂಟು ಮಾಡಿದೆ. ನಾನು ಮನಮೋಹನ್ ಸಿಂಗ್ ಅವರನ್ನು ನೋಡಿದ್ದು 1991ರಲ್ಲಿ, ಲೋಕಸಭೆಯಲ್ಲಿ. ನಾನು ಕೂಡ ಮೊದಲ ಬಾರಿಗೆ ಲೋಕಸಭೆಗೆ ಹೋಗಿದ್ದೆ. ಅವರು ಪಿ.ವಿ.ನರಸಿಂಹ ರಾವ್ ಸರಕಾರದಲ್ಲಿ ಆರ್ಥಿಕ ಸಚಿವರಾಗಿದ್ದರು. ನಮ್ಮ ರಾಷ್ಟ್ರದ ಆರ್ಥಿಕ ಪರಿಸ್ಥಿತಿ ಸರಿಪಡಿಸಲು ಅನೇಕ ಪ್ರಯತ್ನಗಳನ್ನು ಮಾಡಿದರು.

ಆ ಸಂದರ್ಭದಲ್ಲಿ ಆರ್ಥಿಕವಾಗಿ ದೇಶದ ಸ್ಥಿತಿ ಬಹಳ ಹದಗೆಟ್ಟಿತ್ತು. ಅದಕ್ಕೂ ಹಿಂದೆ 130 ಟನ್ ಚಿನ್ನವನ್ನು ಒತ್ತೆ ಇಡಲಾಗಿತ್ತು. ಅಂತಹ ಭೀಕರ ಪರಿಸ್ಥಿತಿ ಇತ್ತು. ಆ ಸನ್ನಿವೇಶದಲ್ಲಿ ಮನಮೋಹನ್ ಸಿಂಗ್ ಆರ್ಥಿಕ ಸಚಿವರಾಗಿ ತಮ್ಮ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿದರು ಎಂದು ಮಾಜಿ ಪ್ರಧಾನಿಗಳು ನೆನಪು ಮಾಡಿಕೊಂಡರು.

ಮನಮೋಹನ್ ಸಿಂಗ್ ಅವರನ್ನು ನಾನು ಬಹಳ ಟೀಕೆ ಮಾಡಿದ್ದೆ. ಅವರ ನೀತಿಗಳನ್ನು ಪ್ರಶ್ನೆ ಮಾಡಿದ್ದೆ. ಖಾಸಗೀಕರಣ, ವಿದೇಶದಿಂದ ಹಣ ಬರಲು ನಮ್ಮ ದೇಶದ ಆರ್ಥಿಕ ನೀತಿಗಳನ್ನು ಮಾರ್ಪಾಡು ಮಾಡಿ ಆರ್ಥಿಕ ಸುಧಾರಣೆಗಳನ್ನು ಜಾರಿಗೆ ತಂದರು. ಇದು ಬಹಳ ದೊಡ್ಡ ಬೆಳವಣಿಗೆ ಎಂದು ಮಾಜಿ ಪ್ರಧಾನಿಗಳು ಬಣ್ಣಿಸಿದರು.

Edited By : Manjunath H D
PublicNext

PublicNext

27/12/2024 06:37 pm

Cinque Terre

35.05 K

Cinque Terre

0

ಸಂಬಂಧಿತ ಸುದ್ದಿ