ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಜ.5 ಕುಶಾಲನಗರದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿ ಚುನಾವಣೆ

ಕುಶಾಲನಗರ: ಕುಶಾಲನಗರದ ನಂ.122 ನೇ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಆಡಳಿತ ಮಂಡಳಿಗೆ ಜನವರಿ 5 ನೇ ತಾರೀಖಿನಂದು ಚುನಾವಣೆ ನಿಗದಿಪಡಿಸಲಾಗಿದೆ.

ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಶುರುವಾಗಿದೆ. ಇಂದು ಟಿ.ಆರ್. ಶರವಣಕುಮಾರ್ ನೇತೃತ್ವದ ಪಕ್ಷಾತೀತ ತಂಡ ನಾಮ ಪತ್ರ ಸಲ್ಲಿಸಿದರು.ಈ ಸಂದರ್ಭ ಟಿ.ಆರ್. ಶರವಣಕುಮಾರ್ ಮಾತನಾಡಿ, ನನಗೆ ಸಿಕ್ಕಿರುವ ಅಧಿಕಾರದ ಅವಧಿಯಲ್ಲಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಸಂಘದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸಿದ್ದೇನೆ‌‌. ನಮ್ಮ ವಿರೋದಿ ಬಣ ನಮ್ಮ ಬಗ್ಗೆ ಇಲ್ಲಸಲ್ಲದ ಆರೋಪ ಮಾಡುತ್ತಿರುವುದು ಸರಿಯಲ್ಲ. ಎಂದರು.ಚುನಾವಣಾ ಅಧಿಕಾರಿ ರವಿಕಾಂತ್ ಅವರು ನಾಮ ಪತ್ರವನ್ನು ಸ್ವೀಕರಿಸಿದರು.

ಈ ವೇಳೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ‌.ಶಶಿಧರ್, ಕಾಂಗ್ರೆಸ್ ನಗರಧ್ಯಕ್ಷ ಜೋಸೆಫ್ ವಿಕ್ಟರ್ ಸೋನ್ಸ್, ಪುರಸಭೆ ಸದಸ್ಯೆ ಸುರಯ್ಯ ಬಾನು, ವಿ.ಜೆ.ನವೀನ್, ಪ್ರಕಾಶ್, ರಂಜನ್, ಸೇರಿದಂತೆ ಮತ್ತಿತರರು ಹಾಜರಿದ್ದರು.

Edited By : PublicNext Desk
Kshetra Samachara

Kshetra Samachara

27/12/2024 06:38 pm

Cinque Terre

120

Cinque Terre

0

ಸಂಬಂಧಿತ ಸುದ್ದಿ