ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಶ್ರವಣಬೆಳಗೊಳ ಮಾದರಿಯಲ್ಲೇ 2ನೇ ಮಹಾಮಸ್ತಕಾಭಿಷೇಕ- ಗುಣಧರನಂದಿ ಸ್ವಾಮೀಜಿ

ಹುಬ್ಬಳ್ಳಿ: ಹುಬ್ಬಳ್ಳಿ ತಾಲೂಕಿನ ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಎರಡನೇ ಮಹಾಮಸ್ತಕಾಭಿಷೇಕದ ಎಲ್ಲ ಸಿದ್ಧತೆಗಳು ಭರದಿಂದ ಸಾಗಿದೆ. ಶ್ರವಣಬೆಳಗೊಳದ ಮಾದರಿಯಲ್ಲಿಯೇ ಸುಮೇರು ಪರ್ವತ ಜಿನಬಿಂಬ ಪ್ರತಿಷ್ಠಾ ಪಂಚಕಲ್ಯಾಣ ಮಹಾಮಹೋತ್ಸವ ಸಮಾರಂಭವನ್ನು 2025ರ ಜನವರಿ 15ರಿಂದ 26ರ ವರೆಗೆ ಆಯೋಜಿಸಲಾಗಿದೆ ಎಂದು ನವಗ್ರಹ ತೀರ್ಥಕ್ಷೇತ್ರದ ರಾಷ್ಟ್ರಸಂತ ಆಚಾರ್ಯ ಶ್ರೀ ಗುಣಧರನಂದಿ ಮಹಾರಾಜರು ಹೇಳಿದರು.

ವರೂರಿನಲ್ಲಿ ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ ಅವರು, ಶ್ರವಣಬೆಳಗೊಳ ಗೊಮ್ಮಟೇಶ್ವರ ಮಹಾಮಸ್ತಕಾಭಿಷೇಕ ಮಾದರಿಯಲ್ಲಿ ಇಲ್ಲಿಯೂ ಮಹಾಮಸ್ತಕಾಭಿಷೇಕ ನಡೆಯಲಿದೆ. 12 ವರ್ಷಗಳ ನಂತರ ನಡೆಯುತ್ತಿರುವ ಎರಡನೇ ಮಹಾಮಸ್ತಕಾಭಿಷೇಕ ಇದು. ಎಲ್ಲ ಸಮಾಜದ ಸಂತರು, ಸಾರ್ವಜನಿಕರು ಭಾಗವಹಿಸುವರು ಎಂದರು.

ಜ.15ರಿಂದ 20ರ ವರೆಗೆ ಪಂಚಕಲ್ಯಾಣ ಪ್ರತಿಷ್ಠಾ ಮಹೋತ್ಸವ ನಡೆಯಲಿದೆ. ಜ.15 ಹಾಗೂ 16ರಂದು ಭಗವಾನ್ ಪಾರ್ಶ್ವನಾಥ ತೀರ್ಥಂಕರ ಗರ್ಭಕಲ್ಯಾಣ ಮಹೋತ್ಸವ, 17ರಂದು ಭಗವಾನ್ ಪಾರ್ಶ್ವನಾಥರ ರಾಜ್ಯಾಭಿಷೇಕ, 19ರಂದು ಕೇವಲ ಜ್ಞಾನ, 20ರಂದು ಮೋಕ್ಷ ಕಲ್ಯಾಣ ಮಹೋತ್ಸವ ನಡೆಯಲಿದೆ. ಜ.20ರ ನಂತರ ನವಗ್ರಹದ ತೀರ್ಥಂಕರ ಮೂರ್ತಿಗಳಿಗೆ ನಿತ್ಯ ಅಭಿಷೇಕ ನಡೆಯಲಿದೆ. 21ರಂದು ನವಗ್ರಹ ಕ್ಷೇತ್ರದಲ್ಲಿನ 9 ತೀರ್ಥಂಕರರ ಮೂರ್ತಿಗಳಿಗೆ ಜನಸಾಮಾನ್ಯರಿಂದ ಜಲಾಭಿಷೇಕ ನಡೆಯಲಿದೆ. 22ರಂದು ಮೂರ್ತಿಗಳ ದಾನಿಗಳಿಂದ ಅಭಿಷೇಕ, 25ರಂದು ಇಂದ್ರ ಮತ್ತು ಇಂದ್ರಾಣಿಯರಿಂದ ಮಹಾಮಸ್ತಕಾಭಿಷೇಕ ಜರುಗಲಿದೆ ಎಂದು ಅವರು ಹೇಳಿದರು.

22, 23 ಹಾಗೂ 24ರಂದು ಹೆಲಿಕಾಪ್ಟರ್​ನಿಂದ ನವಗ್ರಹ ತೀರ್ಥಂಕರರ ಮೇಲೆ ಪುಷ್ಪವೃಷ್ಟಿ ನೆರವೇರಲಿದೆ. 23ರಂದು ಮುಂಜಿ ಬಂಧನ, ಮಂತ್ರ ಸಂಸ್ಕಾರ ಹಾಗೂ ವ್ರತ ಸಂಸ್ಕಾರ ಆಯೋಜಿಸಲಾಗಿದೆ ಎಂದು ವಿವರಿಸಿದರು.

ಜೈನ ಸಮಾಜದ ಮುನಿಗಳು ತಮಿಳುನಾಡು, ರಾಜಸ್ಥಾನ, ಗುಜರಾತ್, ಮಹಾರಾಷ್ಟ್ರ ಹಾಗೂ ಇನ್ನಿತರ ರಾಜ್ಯಗಳಿಂದ ಜ.1ರಿಂದ ನವಗ್ರಹ ಕ್ಷೇತ್ರಕ್ಕೆ ಆಗಮಿಸಲಿದ್ದಾರೆ. ಅಮೆರಿಕ, ಫ್ರಾನ್ಸ್​, ಜರ್ಮನ್​ ಹಾಗೂ ಇನ್ನಿತರ ದೇಶಗಳಿಂದಲೂ ಭಕ್ತರು ಆಗಮಿಸುತ್ತಿದ್ದಾರೆ ಎಂದು ಹೇಳಿದರು.

Edited By : Shivu K
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

27/12/2024 07:58 pm

Cinque Terre

71.99 K

Cinque Terre

0

ಸಂಬಂಧಿತ ಸುದ್ದಿ