ಶಿವಮೊಗ್ಗ : ಬಾವಿಯಲ್ಲಿ ಈಜಲು ಹೋಗಿದ್ದ ಬಾಲಕ ನಾಪತ್ತೆಯಾಗಿರುವ ಘಟನೆ ಶಿವಮೊಗ್ಗ ನಗರದ ರಾಗಿಗುಡ್ಡದಲ್ಲಿ ನಡೆದಿದೆ.
ಮೂವರು ಸ್ನೇಹಿತರೊಂದಿಗೆ ಬಾವಿಯಲ್ಲಿ ಈಜಲು ಹೋಗಿದ್ದ 14 ವರ್ಷದ ಮಹಮ್ಮದ್ ಆಫ್ನಾನ್ ನಾಪತ್ತೆಯಾದ ಬಾಲಕ. ಇನ್ನು ಬಾವಿ ಬಳಿ ಬಾಲಕನ ಚಪ್ಪಲಿ ಮತ್ತು ಬಟ್ಟೆ ಪತ್ತೆಯಾಗಿದ್ದು, ಬಾಲಕನಿಗಾಗಿ ಅಗ್ನಿಶಾಮಕ ದಳ ಸಿಬ್ಬಂದಿ ಮತ್ತು ಶಿವಮೊಗ್ಗ ಗ್ರಾಮಾಂತರ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.
PublicNext
27/12/2024 08:49 pm