ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಭಟ್ಕಳ: ಮಾಲೀಕನ ಮೇಲಿನ ದ್ವೇಷ- ಹಣ್ಣಿನ ಅಂಗಡಿಗೆ ಪೆಟ್ರೋಲ್ ಸುರಿದು ನಾಶ

ಭಟ್ಕಳ: ಹಣ್ಣಿನ ಅಂಗಡಿಯ ಮಾಲೀಕನ ಮೇಲಿನ ದ್ವೇಷದಿಂದ ಹಣ್ಣಿನ ಅಂಗಡಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ಭಟ್ಕಳ ತಾಲೂಕು ಪಂಚಾಯತ್ ಮುಂಭಾಗದಲ್ಲಿ ಮುಂಜಾನೆ 2.30ರ ಸುಮಾರಿಗೆ ನಡೆದಿದೆ.

ಮಾವಿನ ಕುರ್ವೆ ಪಂಚಾಯತ್ ವ್ಯಾಪ್ತಿಯ ತಲಗೋಡ ಕೋಟೆಮನೆ ರಾಮಚಂದ್ರ ಜಟ್ಟಪ್ಪ ನಾಯ್ಕ ಇವರಿಗೆ ಸೇರಿದ ಹಣ್ಣಿನ ಅಂಗಡಿ ಇದಾಗಿದೆ. ಇವರು ಇಲ್ಲಿನ ತಾಲೂಕು ಪಂಚಾಯತ್ ಮುಂಭಾಗದಲ್ಲಿ ತಾತ್ಕಾಲಿಕ ಹಣ್ಣಿನ ಅಂಗಡಿ ನಿರ್ಮಿಸಿಕೊಂಡು ವ್ಯಾಪಾರ ಮಾಡುತ್ತಿದ್ದರು. ‌

ಆದರೆ, ಇವರ ಮೇಲಿನ ದ್ವೇಷದಿಂದಾಗಿ ಪೆಟ್ರೋಲ್ ಹಾಕಿ ಬೆಂಕಿ ಹಾಕಿರುವುದರಿಂದ ಹಣ್ಣಿನ ಅಂಗಡಿ ಹಾಗೂ ಅಂಗಡಿಯಲ್ಲಿದ್ದ ಇತರೆ ಸಾಮಾನುಗಳು ಸೇರಿ ಒಟ್ಟು 7 ಲಕ್ಷ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗೆ ಸುಟ್ಟು ಹೋಗಿದೆ. ಈ ಕುರಿತು ಭಟ್ಕಳ ನಗರ ಠಾಣೆಯಲ್ಲಿ ಹಣ್ಣಿನ ಅಂಗಡಿಯ ಮಾಲೀಕ ರಾಮಚಂದ್ರ ನಾಯ್ಕ ದೂರು ದಾಖಲಿಸಿದ್ದಾರೆ.

Edited By : Shivu K
PublicNext

PublicNext

27/12/2024 08:51 pm

Cinque Terre

49.6 K

Cinque Terre

2

ಸಂಬಂಧಿತ ಸುದ್ದಿ