ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಡಿಕೇರಿ : ಆಟೋ ಚಾಲಕರ ಸಮಸ್ಯೆ ಬಗೆಹರಿಯದಿದ್ದಲ್ಲಿ ಪಂಚಾಯಿತಿ ಎದುರು ಪ್ರತಿಭಟನೆಯ ಎಚ್ಚರಿಕೆ

ನಾಪೋಕ್ಲು: ಸ್ಥಳಿಯ ಪಟ್ಟಣದಲ್ಲಿ ಆಟೋ ಚಾಲಕರು ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದು ಪರಿಹಾರಕ್ಕಾಗಿ ಗ್ರಾಮ ಪಂಚಾಯಿತಿ,ಪೊಲೀಸ್ ಇಲಾಖೆಗೆ ಮನವಿ ಸಲ್ಲಿಸಿದರೂ ಯಾವುದೇ ಕ್ರಮ ಕೈಗೊಂಡಿರುವುದಿಲ್ಲ ಎಂದು ಆರೋಪಿಸಿರುವ ಆಟೋ ಚಾಲಕರು ಸೋಮವಾರದಂದು ಬೆಳಿಗ್ಗೆ 10.30 ಕ್ಕೆ ಗ್ರಾಮ ಪಂಚಾಯಿತಿ ಎದುರು ಆಟೋ ಗಳನ್ನು ನಿಲ್ಲಿಸಿ ಪ್ರತಿಭಟನೆ ನಡೆಸಲಾಗುವುದು ಎಂದು ಆಟೋ ಚಾಲಕರ ಸಂಘದ ಅಧ್ಯಕ್ಷ ಟಿ.ಪಿ.ಸುಕುಮಾರ್ ಹೇಳಿದರು.

ಪಟ್ಟಣದಲ್ಲಿ ಆಯೋಜಿಸಿದ ಆಟೋ ಚಾಲಕರ ಮತ್ತು ಮಾಲೀಕರ ಸಂಘದ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಪಟ್ಟಣದಲ್ಲಿ ಆಟೋ ಚಾಲಕರು ಸೂಕ್ತ ನಿಲ್ದಾಣ ಇಲ್ಲದೆ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಇಲ್ಲಿನ ಅಪ್ಪಚ್ಚ ಕವಿ ರಸ್ತೆಯಲ್ಲಿ ಆಟೋ ನಿಲುಗಡೆಗೆ ಅವಕಾಶ ಕಲ್ಪಿಸಲಾಗಿದೆ.ಇಲ್ಲಿ 120 ಮೀ.ಸ್ಥಳದಲ್ಲಿ 40 ಆಟೋಗಳನ್ನು ನಿಲ್ಲಿಸಬಹುದಾಗಿದೆ.ಎನ್ ಪಿಕೆ ಸಂಖ್ಯೆ ಹೊಂದಿರುವ 160 ಕ್ಕೂ ಅಧಿಕ ಆಟೋಗಳು ಪಟ್ಟಣದಲ್ಲಿ ಸಂಚರಿಸುತ್ತಿವೆ.ಉಳಿದ 120 ಆಟೋಗಳಿಗೆ ನಿಲುಗಡೆಗೆ ಅವಕಾಶವಿಲ್ಲದಾಗಿದೆ ಇನ್ನು 40 ಕ್ಕೂ ಅದಿಕ ಎನ್ ಪಿಕೆ ಸಂಖ್ಯೆ ಇಲ್ಲದ ಆಟೋಗಳೂ ಇದ್ದು .ಪ್ರತಿನಿತ್ಯ ಖಾಸಗಿ ವಾಹನಗಳ ಮಾಲೀಕರೊಂದಿಗೆ ವಾಗ್ಯುದ್ಧ ನಡೆಯುವ ಪರಿಸ್ಥಿತಿ ಇದೆ. ಇಲ್ಲಿ ಖಾಸಗಿ ವಾಹನಗಳು ನಿಲುಗಡೆ ಮಾಡುತ್ತಿರುವುದರಿಂದ ಸಮಸ್ಯೆ ಉಂಟಾಗುತ್ತಿದೆ ಎಂದರು.

Edited By : PublicNext Desk
Kshetra Samachara

Kshetra Samachara

27/12/2024 08:57 pm

Cinque Terre

340

Cinque Terre

0

ಸಂಬಂಧಿತ ಸುದ್ದಿ