ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮನಮೋಹನ ಸಿಂಗ್ ಅಂತ್ಯಕ್ರಿಯೆ ಇಂದು: ಆರ್ಥಿಕ 'ಚಾಣಾಕ್ಷ'ನಿಗೆ ವಿಶ್ವದೆಲ್ಲಡೆ ಸಂತಾಪ

ನವದೆಹಲಿ: ಭಾರತದ ಆರ್ಥಿಕತೆಗೆ ಹೊಸ ದಿಕ್ಕು ತೋರಿದ, ಮಾಜಿ ಪ್ರಧಾನಿ ಮನಮೋಹನ ಸಿಂಗ್ ಅವರ ಪಾರ್ಥಿವ ಶರೀರಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವರು ಶುಕ್ರವಾರ ಶ್ರದ್ಧಾಂಜಲಿ ಸಲ್ಲಿಸಿದರು.

ತ್ರಿವರ್ಣ ಧ್ವಜ ಹೊದಿಸಿರುವ ಮೃತದೇಹಕ್ಕೆ ಪ್ರಮುಖ ರಾಜಕೀಯ ನಾಯಕರು ಪಕ್ಷಭೇದ ಮರೆತು ಅಂತಿಮ ನಮನ ಸಲ್ಲಿಸಿದರು. ಭಾರತದ ಆರ್ಥಿಕ ಸುಧಾರಣೆಗಳ ಹರಿಕಾರ ಎಂದೇ ಖ್ಯಾತರಾದ ಮನಮೋಹನ ಸಿಂಗ್‌ (92) ಅವರು ನವದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ (ಎಐಐಎಂಎಸ್‌) ಗುರುವಾರ ರಾತ್ರಿ ನಿಧನರಾಗಿದ್ದರು.

ಮೃತದೇಹವನ್ನು ದೆಹಲಿಯ ಲುಟೆನ್ಸ್‌ ಪ್ರದೇಶದ, ಮೋತಿಲಾಲ್‌ ನೆಹರೂ ರಸ್ತೆಯಲ್ಲಿರುವ ಅವರ ನಿವಾಸದಲ್ಲಿ ಇಡಲಾಗಿದೆ. ಸಕಲ ಸರ್ಕಾರಿ ಗೌರವದೊಂದಿಗೆ ಶನಿವಾರ ಅಂತ್ಯಕ್ರಿಯೆ ನಡೆಯಲಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್‌ ತಿಳಿಸಿದರು.

‘ನಿಗಮ್‌ಬೋಧ್‌ ಘಾಟ್‌ ಸ್ಮಶಾನದಲ್ಲಿ ಬೆಳಿಗ್ಗೆ 11.45ಕ್ಕೆ ಅಂತ್ಯಕ್ರಿಯೆ ನಡೆಸಲು ಸರ್ಕಾರ ನಿರ್ಧರಿಸಿದೆ’ ಎಂದು ಕೇಂದ್ರ ಗೃಹ ಸಚಿವಾಲಯದ ಪ್ರಕಟಣೆ ತಿಳಿಸಿದೆ.

ಉಪರಾಷ್ಟ್ರಪತಿ ಜಗದೀಪ್‌ ಧನಕರ್, ಕೇಂದ್ರ ಸಚಿವರಾದ ಅಮಿತ್‌ ಶಾ ಮತ್ತು ರಾಜನಾಥ್‌ ಸಿಂಗ್‌, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಸ್ಪೀಕರ್‌ ಓಂ ಬಿರ್ಲಾ, ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳಾದ ಎಂ.ಕೆ.ಸ್ಟಾಲಿನ್, ಎನ್‌.ಚಂದ್ರಬಾಬು ನಾಯ್ಡು, ರೇವಂತ ರೆಡ್ಡಿ ಮತ್ತು ಆತಿಶಿ ಅವರು ಶ್ರದ್ಧಾಂಜಲಿ ಸಲ್ಲಿಸಿದರು.

Edited By : Abhishek Kamoji
PublicNext

PublicNext

28/12/2024 07:25 am

Cinque Terre

59.59 K

Cinque Terre

2

ಸಂಬಂಧಿತ ಸುದ್ದಿ