ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹೊಳಲ್ಕೆರೆ: ಮೂಕ ಪ್ರಾಣಿಗಳಿಗೆ ಚಿಕಿತ್ಸೆ ನೀಡುವ ಪಶುವೈದ್ಯರ ಸೇವೆಯೂ ಅತ್ಯಂತ ಶ್ರೇಷ್ಟವಾದುದು

ಹೊಳಲ್ಕೆರೆ: ವೈದ್ಯಕೀಯ ವೃತ್ತಿ ಅತ್ಯಂತ ಪವಿತ್ರವಾದುದು ಅಮೂಲ್ಯವಾದ ಪ್ರಾಣ ಉಳಿಸುವ ಜವಾಬ್ದಾರಿ ವೈದ್ಯರುಗಳ ಮೇಲಿದೆ ಎಂದು ಸಾಣೆಹಳ್ಳಿಯ ಡಾ.ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದರು.ಕರ್ನಾಟಕ ರಾಜ್ಯ ವಿಶ್ರಾಂತ ನೌಕರರ ಸಾಂಸೃತಿಕ ಕ್ರೀಡೆ ಮನೋರಂಜನಾ ಕೇಂದ್ರ ಬೆಂಗಳೂರು, ಹೊಳಲ್ಕೆರೆ ಶಾಖೆ ಹಾಗೂ ಮಾರುತಿ ನಿವೃತ್ತ ನೌಕರರ ಸಂಘದ ಸಹಯೋಗದೊಂದಿಗೆ ಮಲ್ಲಾಡಿಹಳ್ಳಿ ಸಮೀಪವಿರುವ ಕೆಂಗುಂಟೆ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದ್ದ ಸನ್ಮಾನ ಸಮಾರಂಭದ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು.

ಮೂಕ ಪ್ರಾಣಿಗಳಿಗೆ ಚಿಕಿತ್ಸೆ ನೀಡುವ ಪಶುವೈದ್ಯರ ಸೇವೆಯೂ ಅತ್ಯಂತ ಶ್ರೇಷ್ಟವಾದುದು. ಹಾಗಾಗಿ ವೈದ್ಯರುಗಳು ಸಮಯಪ್ರಜ್ಞೆ ಮತ್ತು ಕರ್ತವ್ಯ ನಿಷ್ಟೆಯನ್ನು ಅಳವಡಿಸಿಕೊಳ್ಳಬೇಕು. ಎಲ್.ಬಿ.ರಾಜಪ್ಪನವರು ಸಾಧಕರನ್ನು ಗುರುತಿಸಿ ಸನ್ಮಾನಿಸುತ್ತಿರುವುದು ಬೇರೆಯವರಿಗೆ ಪ್ರೇರಣೆ ನೀಡಿದಂತಾಗಿದೆ ಎಂದು ಹೇಳಿದರು.

Edited By : PublicNext Desk
Kshetra Samachara

Kshetra Samachara

28/12/2024 07:56 am

Cinque Terre

1.62 K

Cinque Terre

0

ಸಂಬಂಧಿತ ಸುದ್ದಿ