ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸುರತ್ಕಲ್: ತಡಂಬೈಲ್ ಬಳಿ ಗ್ಯಾಸ್ ಸ್ಫೋಟ ಪ್ರಕರಣ- ಗಾಯಾಳು ಮೃತ್ಯು

ಸುರತ್ಕಲ್: ಸಮೀಪದ ತಡಂಬೈಲ್ ವೆಂಕಟರಮಣ ಕಾಲನಿಯಲ್ಲಿ ಡಿ.18ರಂದು ಮಧ್ಯಾಹ್ನ ಅಡುಗೆ ಮನೆಯಲ್ಲಿದ್ದ ಗ್ಯಾಸ್ ಸಿಲಿಂಡರ್‌ನಿಂದ ಅಡುಗೆ ಅನಿಲ ಸೋರಿಕೆಯಿಂದ ಬೆಂಕಿ ಹೊತ್ತಿಕೊಂಡು ಗಂಭೀರ ಗಾಯಗೊಂಡಿದ್ದ ಪುಷ್ಪಾ (72) ಎಂಬವರು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಪುಷ್ಪಾ ಹಾಗೂ ಅವರ ನಾದಿನಿ ವಸಂತಿ ರವರಿಗೆ ಕಳೆದ 9 ದಿನಗಳಿಂದ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು ಪುಷ್ಪಾ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ವಸಂತಿರವರು ಗ್ಯಾಸ್ ಸೋರಿಕೆಯಾಗಿರುವುದನ್ನು ಗಮನಿಸದೆ ಮಧ್ಯಾಹ್ನ ಅಡುಗೆ ಕೋಣೆಗೆ ಹೋಗಿ ಸ್ಟವ್ ಹಚ್ಚಿದ್ದರಿಂದ ದೊಡ್ಡ ಮಟ್ಟದ ಸ್ಫೋಟವಾಗಿ ಬೆಂಕಿ ಏಕಾಏಕಿ ವ್ಯಾಪಿಸಿಕೊಂಡಿತ್ತು.

ಈ ಸಂದರ್ಭ ವಸಂತಿ ಸಹಾಯಕ್ಕಾಗಿ ಕೂಗಿದಾಗ ಅವರನ್ನು ರಕ್ಷಿಸಲು ಹೋದ ಪುಷ್ಪಾರಿಗೂ ಬೆಂಕಿ ತಗಲಿ ತೀವ್ರ ತರಹದ ಸುಟ್ಟ ಗಾಯಗಳಾಗಿತ್ತು.

Edited By : PublicNext Desk
Kshetra Samachara

Kshetra Samachara

28/12/2024 09:38 am

Cinque Terre

3.33 K

Cinque Terre

0

ಸಂಬಂಧಿತ ಸುದ್ದಿ