ಉಪ್ಪಿನಂಗಡಿ:ಸಮೀಪದ ಪೆರ್ನೆ ಮತ್ತು ಪೆರ್ಲಾಪು ಸನಿಹದಲ್ಲಿರುವ ಬಂಗಾರುಬೆಟ್ಟು ಮಠ ನದಿಯಿಂದ ಎಂಬಲ್ಲಿ ನೇತ್ರಾವತಿ ಅಕ್ರಮವಾಗಿ ಮರಳುಗಾರಿಕೆ ನಡೆಯುತ್ತಿರುವ ಬಗ್ಗೆ ವ್ಯಾಪಕ ದೂರುಗಳು ವ್ಯಕ್ತವಾಗಿವೆ. ಉಪ್ಪಿನಂಗಡಿ ಸಮೀಪ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆಯಲಾಗುತ್ತಿದೆ.
ಹಗಲು ಮತ್ತು ರಾತ್ರಿಯಲ್ಲಿಯೂ ಮರಳು ತೆಗೆಯಲಾಗುತ್ತಿದ್ದು, ದಿನನಿತ್ಯ 30ರಿಂದ 40 ಲಾರಿ ಮರಳು ಅಕ್ರಮವಾಗಿಮರಳುಸಂಗ್ರಹಿಸಲಾಗಿ ಯಾವುದೇ ದಾಖಲೆ ಪತ್ರಗಳಿಲ್ಲದೆ ಉಪ್ಪಿನಂಗಡಿ, ಪುತ್ತೂರು, ಬಂಟ್ವಾಳ ಕಡೆಗೆ ಸಾಗಾಟ ನಡೆಯುತ್ತಿದೆ ಎನ್ನಲಾಗಿದೆ. ಈ ಬಗ್ಗೆ ಗ್ರಾಮಸ್ಥರು ಪುತ್ತೂರು ಉಪ ವಿಭಾಗಾಧಿಕಾರಿ ಮತ್ತು ಮಂಗಳೂರು ಗಣಿ ಇಲಾಖೆಗೆ ದೂರು ಸಲ್ಲಿಸಿದ್ದಾರೆ.
ಸಾರ್ವಜನಿಕರ ದೂರು ಆಧರಿಸಿ ಪ್ರದೇಶವಾರು ಅಧಿಕಾರಿಗೆ ನಿರ್ದೇಶನ ನೀಡಲಾಗುತ್ತದೆ. ಈ ಪ್ರಕರಣದ ಬಗ್ಗೆ ಪರಿಶೀಲನೆ ನಡೆಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಗಣಿ ಇಲಾಖೆಯ ಹಿರಿಯ ಭೂ ವಿಜ್ಞಾನಿ ಕೃಷ್ಣವೇಣಿ ತಿಳಿಸಿದ್ದಾರೆ.
Kshetra Samachara
28/12/2024 09:42 am