ಹುಬ್ಬಳ್ಳಿ: ಮನೆಯ ಬಾಗಿಲು ಮುರಿದು ಮನೆಯಲ್ಲಿದ್ದ ಗಂಡ ಹೆಂಡತಿಯ ಕೈಕಾಲು ಕಟ್ಟಿ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಮನೆಯಲ್ಲಿದ್ದ ಚಿನ್ನಾಭರಣ ಹಾಗೂ ನಗದು ದರೋಡೆ ಮಾಡಿ ಪರಾರಿಯಾಗಿದ್ದ ನಟೋರಿಯಸ್ ಚಡ್ಡಿ ಗ್ಯಾಂಗ್ ದರೊಡೆಕೋರನ ಮೇಲೆ ವಿದ್ಯಾಗಿರಿ ಠಾಣೆಯ ಪೊಲೀಸರು ಫೈರಿಂಗ್ ಮಾಡಿದ್ದಾರೆ.
ಕಳೆದ 6 ತಿಂಗಳ ಹಿಂದೆ ಧಾರವಾಡದ ವಿದ್ಯಾಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಎಸ್ಡಿಎಂ ಆಸ್ಪತ್ರೆಯ ಹಿಂಭಾಗದ ಅಶೋಕ ಕದಂ ಎಂಬುವರ ಮನೆ ಬಾಗಿಲಿಗೆ ಕಲ್ಲು ಒಗೆದು ಬಾಗಿಲು ಮುರಿದು ರಾತ್ರಿ ಸಮಯದಲ್ಲಿ ಮನೆಯಲ್ಲಿದ್ದ ದಂಪತಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ದರೋಡೆ ಮಾಡಿ ಪರಾರಿಯಾಗಿದ್ರು.
ಈ ಪ್ರಕರಣವನ್ನು ಬೆನ್ನತ್ತಿದ್ದ ವಿದ್ಯಾಗಿರಿ ಠಾಣೆಯ ಪೊಲೀಸರು ಸಿಸಿ ಕ್ಯಾಮರಾ ಪರಿಶೀಲನೆ ನಡೆಸಿದಾಗ ಆರೋಪಿಗಳು ಆಂಧ್ರಪ್ರದೇಶದ ಕರ್ನುಲ್'ನ ನಟೋರಿಯಸ್ ಚಡ್ಡಿ ಗ್ಯಾಂಗ್ ಅನ್ನೋದು ಗೊತ್ತಾಗಿದೆ. ಈ ಪ್ರಕರಣವನ್ನು ಬೆನ್ನತ್ತಿದ್ದ ವಿದ್ಯಾಗಿರಿ ಠಾಣೆಯ ಪೊಲೀಸರು ಪ್ರಕರಣವನ್ನು ಬೆನ್ನತ್ತಿದ್ದರು.
ಈ ಪ್ರಕರಣ ಮಾಸುವ ಮುನ್ನವೇ ಇದೆ ಗ್ಯಾಂಗ್ ನವಲೂರಿನಲ್ಲಿ ಶುಕ್ರವಾರ ರಾತ್ರಿ ಮನೆಯೊಂದನ್ನು ದರೋಡೆ ಮಾಡಲು ಪ್ಲ್ಯಾನ್ ಮಾಡಿದ್ದ, ವೇಳೆ ವಿದ್ಯಾಗಿರಿ ಠಾಣೆಯ ಪೊಲೀಸರು ಆರೋಪಿಗಳನ್ನು ಬಂಧಿಸಲು ಹೋದಾಗ ಪೊಲೀಸರ ಮೇಲೆ ಹಲ್ಲೆ ಮಾಡಲು ಮುಂದಾಗಿದ್ರು. ಆ ವೇಳೆ ಆತ್ಮರಕ್ಷಣೆಗಾಗಿ PSI ಪ್ರಮೋದ ದರೊಡೆಕೋರ ಪಾಲಾ ವೆಂಕಟೇಶ್ವರ ರಾವ್ ಮೇಲೆ ಗುಂಡು ಹಾರಿಸಿದ್ದಾರೆ.
ಸದ್ಯ ಘಟನೆಯಲ್ಲಿ PSI ಪ್ರಮೋದ ಸೇರಿದಂತೆ ಓರ್ವ ಪೊಲೀಸ್ ಕಾನ್ಸ್ಟೇಬಲ್ಗೆ ಗಾಯವಾಗಿದೆ. ಕಮಿಷನರ್ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ಈ ನಟೋರಿಯಸ್ ದರೋಡೆ ಮಾಡುವ ಚಡ್ಡಿ ಗ್ಯಾಂಗ್ ಕರ್ನಾಟಕದ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ದರೋಡೆ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದ್ದು ಪೊಲೀಸರು ತನಿಖೆಯನ್ನು ನಡೆಸಿದ್ದಾರೆ.
ವಿನಯ ರೆಡ್ಡಿ ಕ್ರೈಂ ಬ್ಯುರೋ ಪಬ್ಲಿಕ್ ನೆಕ್ಸ್ಟ್
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
28/12/2024 10:33 am