ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಿಪ್ಪನ್ ಪೇಟೆ ಸಮೀಪ ಹಿಟ್ ಅಂಡ್ ರನ್ ಬೈಕ್ ಸವಾರ ಸಾವು

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಗವಟೂರು ಗ್ರಾಮದ ಬಳಿ ಬೈಕ್ ಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ನಡೆದಿದೆ.

ಬಿಳಿಕಿ ನಿವಾಸಿ ಸಂಜೀವ್ ಪೂಜಾರಿ (65) ಮೃತ ದುರ್ಧೈವಿ. ಮನೆಯಿಂದ ರಿಪ್ಪನ್‌ಪೇಟೆಗೆ ಹೊರಡುತಿದ್ದಾಗ ಗವಟೂರು ಸರ್ಕಾರಿ ಶಾಲೆಯ ಸಮೀಪದಲ್ಲಿ ಅಪರಿಚಿತ ವಾಹನವೊಂದು ಡಿಕ್ಕಿಯಾಗಿ ಬೈಕ್ ಸವಾರನಿಗೆ ತೀವ್ರ ಗಾಯವಾಗಿತ್ತು, ಕೂಡಲೇ ಅದೇ ಮಾರ್ಗವಾಗಿ ಬಂದ ಪಿಎಸ್ ಐ ಗಾಯಾಳನ್ನ ತನ್ನ ಖಾಸಗಿ ವಾಹನದಲ್ಲಿ ರಿಪ್ಪನ್‌ಪೇಟೆ ಆಸ್ಪತ್ರೆಗೆ ದಾಖಲಿಸಿದ್ದಾರೆ, ಆದರೆ ಗಾಯಾಳುವಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಆಂಬುಲೆನ್ಸ್ ಗೆ ಶಿಫ್ಟ್ ಮಾಡುವ ವೇಳೆ ಸಂಜೀವ್ ಪೂಜಾರಿ ಮೃತಪಟ್ಟಿದ್ದಾರೆ. ಈ ಸಂಬಂಧ ರಿಪ್ಪನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : Nirmala Aralikatti
Kshetra Samachara

Kshetra Samachara

28/12/2024 01:41 pm

Cinque Terre

4.86 K

Cinque Terre

0

ಸಂಬಂಧಿತ ಸುದ್ದಿ