ಚಳ್ಳಕೆರೆ: ಭಾರತದ ಪ್ರಧಾನ ಮಂತ್ರಿಯಾಗಿದ್ದ ಸಂದರ್ಭದಲ್ಲಿ ಸುದೀರ್ಘ ಉತ್ತಮ ಆಡಳಿತ ನಡೆಸಿ ಬಡತನ ನಿರ್ಮೂಲನೆಗೆ ಪ್ರಾಮಾಣಿಕ ಪ್ರಯತ್ನ ನಡೆಸಿದ ಇಂದಿರಾ ಗಾಂಧಿ ನಂತರ ದೇಶದ ಆರ್ಥಿಕತೆಗೆ ಶಕ್ತಿ ತುಂಬಿದ ಕೀರ್ತಿ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರಿಗೆ ಸಲ್ಲುತ್ತದೆ ಎಂದು ಚಳ್ಳಕೆರೆ ಬ್ಲಾಕ್ ಕಾಂಗ್ರೆಸ್ ನ ಮಾಜಿ ಅಧ್ಯಕ್ಷರಾದ ಟಿ ತಿಪ್ಪೇಸ್ವಾಮಿ ಹೇಳಿದರು.
ನಗರದ ಶಾಸಕರ ಭವನದಲ್ಲಿ ಚಳ್ಳಕರೆ ಮತ್ತು ಪರಶುರಾಮಪುರ ಬ್ಲಾಕ್ ಕಾಂಗ್ರೆಸ್ ಘಟಕದಿಂದ ಮಾಜಿ ಪ್ರಧಾನ ಮಂತ್ರಿ ಮನಮೋಹನ್ ಸಿಂಗ್ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿ ಪ್ರಸ್ತುತ ರಾಜಕೀಯ ಪರಿಸ್ಥಿತಿಯಲ್ಲಿ ಅಧಿಕಾರ ಪಡೆಯಲು ಕಿತ್ತಾಟ ನಡೆಸುವ ಸಂದರ್ಭದಲ್ಲಿ ಮೌನವಾಗಿ ಸಭೆಯಲ್ಲಿ ಭಾಗವಹಿಸಿದ್ದ ಮನಮೋಹನ್ ಸಿಂಗ್ ಅವರಿಗೆ ದೇಶದ ಪ್ರಧಾನಿ ಪಟ್ಟವನ್ನು ಕಾಂಗ್ರೆಸ್ ಪಕ್ಷ ನೀಡಿತ್ತು. ಮನಮೋಹನ್ ಸಿಂಗ್ ರವರು ದೇಶದ ಪ್ರಧಾನಿಯಾದ ಮೇಲೆ ಭಾರತದ ಆರ್ಥಿಕತೆಗೆ ಹೆಚ್ಚು ಶಕ್ತಿ ತುಂಬಿದರು ಎಂದರು.
Kshetra Samachara
28/12/2024 02:53 pm