ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತರ ಕಾರ್ಯವೈಖರಿಗೆ ಬೇಸತ್ತು ಹಾಗೂ ಪೌರಕಾರ್ಮಿಕರ ಬೇಡಿಕೆಗೆ ಸ್ಪಂದಿಸದೇ ಇರುವ ಹಿನ್ನೆಲೆಯಲ್ಲಿ ಪಾಲಿಕೆಯ ಕಚೇರಿಯ ಮುಂದೆಯೇ ಪೌರಕಾರ್ಮಿಕರು ಪಾಲಿಕೆ ಆಯುಕ್ತರ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಿದರು.
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಹಾನಗರ ಪಾಲಿಕೆ ಎದುರು ಪೌರಕಾರ್ಮಿಕರು ನಡೆಸುತ್ತಿರುವ ಅಹೋರಾತ್ರಿ ಧರಣಿ ಶುಕ್ರವಾರ 17ನೇ ದಿನಕ್ಕೆ ಕಾಲಿಟ್ಟಿದೆ. ಧರಣಿ ನಿರತರು ಪಾಲಿಕೆ ಆಯುಕ್ತರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.
ಕಳೆದ 17 ದಿನಗಳಿಂದ ನೇರ ನೇಮಕಾತಿ, ನೇರ ವೇತನ ಪಾವತಿ ಹಾಗೂ ವಿವಿಧ ಹಕ್ಕೊತ್ತಾಯಗಳನ್ನು ಈಡೇರಿಸುವಂತೆ ಆಗ್ರಹಿಸಿ ನಡೆಸುತ್ತಿರುವ ಹೋರಾಟಕ್ಕೆ ಜಿಲ್ಲಾಧಿಕಾರಿ, ಪಾಲಿಕೆ ಆಯುಕ್ತರು ಸ್ಪಂದಿಸುತ್ತಿಲ್ಲ. ಸರ್ಕಾರದ ಆದೇಶದಂತೆ ನೇರ ನೇಮಕಾತಿ ಆದೇಶ ಪತ್ರಗಳನ್ನು ನೀಡದೇ ವಂಚಿಸುತ್ತಿದ್ದಾರೆ. ಸರ್ಕಾರದ ಆದೇಶವನ್ನು ಧಿಕ್ಕರಿಸಿ ಕಾನೂನು ಬಾಹಿರವಾಗಿ ಗುತ್ತಿಗೆ ಮುಂದುವರಿಸಿದ್ದಾರೆ.
ಪಾಲಿಕೆ ಠರಾವು ಅನ್ವಯ ಕನಿಷ್ಠ ವೇತನ ವ್ಯತ್ಯಾಸದ ಬಾಕಿ 9 ಕೋಟಿ ಪಾವತಿಸಬೇಕು. ಪಾಲಿಕೆ ಆಯುಕ್ತರ ಆದೇಶದಂತೆ 868 ಮಹಿಳಾ ಪೌರಕಾರ್ಮಿಕರಿಗೆ ತಲಾ 2500 ರಂತೆ ಒಟ್ಟು 21.70 ಲಕ್ಷ ಪಾವತಿಸಬೇಕು. ತುಟ್ಟಿಭತ್ಯೆ ಬಾಕಿ ಮೊತ್ತ 2 ಕೋಟಿ ಪಾವತಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಲಾಯಿತು.
Kshetra Samachara
28/12/2024 03:15 pm