ಶಿವಮೊಗ್ಗ: 8 ತಿಂಗಳ ವೇತನ ಹಿಂಬಾಕಿ ಪಾವತಿಸಬೇಕು, ಹೊಸ ವೇತನ ಪರಿಷ್ಕರಣೆ ಹಾಗೂ ಇತರ ಬೇಡಿಕೆಗಳನ್ನು ಇತ್ಯರ್ಥಪಡಿಸಬೇಕು, ನಿವೃತ್ತರಾದ ನೌಕರರಿಗೆ ಸುತ್ತೋಲೆ ಹಣವನ್ನು ಕೂಡಲೇ ಬಿಡುಗಡೆ ಮಾಡಬೇಕೆಂಬುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ವತಿಯಿಂದ ಡಿ.31ರಿಂದ ಸಾರಿಗೆ ನೌಕರರ ಅನಿರ್ದಿಷ್ಟವಾಧಿ ಮುಷ್ಕರ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿ ರಾಜ್ಯ ಉಪಾಧ್ಯಕ್ಷ ಎಂ.ಮಹದೇವ್ ಹೇಳಿದರು.
ಶಿವಮೊಗ್ಗದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತಾನಾಡಿದ ಅವರು ಹಿಂದಿನ ವೇತನ ಹೆಚ್ಚಳ 38 ತಿಂಗಳ ಬಾಕಿ ಉಳಿಯಲು ಸರ್ಕಾರ ಹಾಗೂ ಆಡಳಿತ ವರ್ಗದ ವಿಳಂಬ ಧೋರಣೆ ಕಾರಣವಾಗಿದ್ದು, ಸರ್ಕಾರದ ಶಕ್ತಿ ಯೋಜನೆಯಿಂದ ಸರ್ಕಾರಕ್ಕೆ ಹಾಗೂ ಸಾರ್ವಜನಿಕರಿಗೆ ದೊಡ್ಡ ಪ್ರಮಾಣದ ಲಾಭ ದೊರೆತಿದೆ. ಹಲವು ಹತ್ತು ಸಮಸ್ಯೆಗಳನ್ನು ಅನುಭವಿಸಿ ಸಾರಿಗೆ ಕಾರ್ಮಿಕರು ಈ ಯೋಜನೆಯನ್ನು ಯಶಸ್ವಿಗೊಳಿಸಿ ಹೈರಾಣಾಗಿದ್ದಾರೆ. ಆದ್ದರಿಂದ 38 ತಿಂಗಳ ಬಾಕಿ ಹಣ, 2024ರ ಜನವರಿ 1ರಿಂದ ಹೊಸ ವೇತನ ಮತ್ತಿತರ, ಬೇಡಿಕೆಗಳನ್ನು ಈಡೇರಿಸಬೇಕಾಗಿರುವುದು ಸರ್ಕಾರದ ಹಾಗೂ ಆಡಳಿತ ವರ್ಗದ ಜವಾಬ್ದಾರಿಯಾಗಿದೆ ಎಂದರು.
Kshetra Samachara
28/12/2024 04:20 pm