ಶಿವಮೊಗ್ಗ: ಅಂತರಾಷ್ಟ್ರೀಯ ಛಾಯಾಚಿತ್ರ ಪ್ರಶಸ್ತಿ ವಿಜೇತ ಪತ್ರಿಕಾ ಮತ್ತು ವನ್ಯಜೀವಿ ಛಾಯಾಗ್ರಾಹಕ ಶಿವಮೊಗ್ಗ ನಾಗರಾಜ್ ಅವರಿಗೆ ಕನ್ನಡ ರಾಜ್ಯೋತ್ಸವದ ಕಾರ್ಯಕ್ರಮ ದಲ್ಲಿ ಕರವೇ ಸ್ವಾಭಿಮಾನಿ ಬಳಗದಿಂದ " ಸೇವಾ ರತ್ನ " ಪ್ರಶಸ್ತಿ ನೀಡಿ ಗೌರವಿಸಲಾಯಿತು,
ಶಿವಮೊಗ್ಗ ನಾಗರಾಜ್ ಸೆರೆಹಿಡಿದ ಛಾಯಾಚಿತ್ರಗಳು ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರದರ್ಶನಗೊಂಡು ತೀರ್ಪುಗಾರರ ಮೆಚ್ಚುಗೆ ಜೊತೆಗೆ ಚಿನ್ನ, ಬೆಳ್ಳಿ ಪದಕ ಬಹುಮಾನ ಪಡೆದಿದೆ, ಶಿವಮೊಗ್ಗದಲ್ಲಿ ನಾಗರಾಜ್ ಅವರು ಜನ ಜಾಗೃತಿ ಗಾಗಿ ನಿರಂತರ ವನ್ಯಜೀವಿ ಮತ್ತು ಗ್ರಾಮೀಣ ಬದುಕು ಛಾಯಾಚಿತ್ರ ಪ್ರದರ್ಶನವನ್ನು ಏರ್ಪಡಿಸಿಕೊಂಡು ಬಂದಿರುತ್ತಾರೆ. ಇವರಿಗೆ ಶಿವಮೊಗ್ಗ ನಗರದಲ್ಲಿ ನಡೆದ ಕನ್ನಡ ರಾಜ್ಯೋತ್ಸವದ ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್ " " ಸೇವಾ ರತ್ನ " ನೀಡಿ ಗೌರವಿಸಿದರು, ವೇದಿಕೆಯಲ್ಲಿ ರಾಜ್ಯಾಧ್ಯಕ್ಷರಾದ ಕೃಷ್ಣೆಗೌಡ, ಜಿಲ್ಲಾಧ್ಯಕ್ಷರಾದ ಕಿರಣ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು
Kshetra Samachara
28/12/2024 04:31 pm