ಚಿತ್ರದುರ್ಗ: ಟಾಟಾ ಏಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲ್ಲೂಕಿನ ಮಲ್ಲೇನಹಳ್ಳಿ ಬಳಿ ಘಟನೆ ನಡೆದಿದೆ.
ಘಟನೆಯಲ್ಲಿ ಪ್ರಕಾಶ್ (26), ಮಾರುತಿ (26) ಎಂಬ ಇಬ್ಬರು ಯುವಕರು ಮೃತಪಟ್ಟಿದ್ದಾರೆ. ಲಾರಿ ಓವರ್ ಟೇಕ್ ಮಾಡುವ ಭರದಲ್ಲಿ ಮುಂದೆ ಬರುತ್ತಿದ್ದ ಟಾಟಾ ಏಸ್‌ಗೆ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ್ದಾರೆ. ಮೃತರನ್ನ ಹೊಸದುರ್ಗ ತಾಲ್ಲೂಕಿನ ಬೆಲಗೂರು ನಿವಾಸಿಗಳು ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ಶ್ರೀರಾಂಪುರ ಠಾಣೆ ಪಿಐ ಮಧು ಭೇಟಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಶ್ರೀರಾಂಪುರ ಠಾಣೆ ವ್ಯಾಪ್ತಿಯಲ್ಲಿ FIR ದಾಖಲಾಗಿದೆ.
Kshetra Samachara
28/12/2024 05:48 pm