ಮುಂಬೈ : ಮರಾಠಿ ನಟಿ ಊರ್ಮಿಳಾ ಕೊಥಾರೆ ಕಾರು ಡಿಕ್ಕಿ ಹೊಡೆದ ಪರಿಣಾಮ ಓರ್ವ ಕಾರ್ಮಿಕ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬ ಕಾರ್ಮಿಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮುಂಬೈನ ಕಂಡಿವಲಿ ಪ್ರದೇಶದಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮುಂಬೈನ ಕಂಡಿವಲಿ ಪೂರ್ವದ ಪೊಯ್ಸರ್ ಮೆಟ್ರೊ ನಿಲ್ದಾಣದ ಬಳಿ ಕೆಲಸ ಮಾಡುತ್ತಿದ್ದ ಇಬ್ಬರು ಕಾರ್ಮಿಕರಿಗೆ ಕಾರು ಡಿಕ್ಕಿ ಹೊಡೆದಿದೆ. ಸೂಕ್ತ ಸಮಯಕ್ಕೆ ಏರ್ ಬ್ಯಾಗ್ ತೆರೆದುಕೊಂಡಿದ್ದರಿಂದ ಊರ್ಮಿಳಾ ಕೊಥಾರೆ ಹಾಗೂ ಕಾರಿನ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಸಮತಾ ನಗರ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇನ್ನು ಕಾರು ಚಾಲಕ ಹಾಗೂ ನಟಿ ಊರ್ಮಿಳಾ ಕೂಡ ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತಕ್ಕೆ ಅತೀಯಾದ ವೇಗವೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ.
PublicNext
28/12/2024 07:17 pm