ಮಡಿಕೇರಿ: ಮರಗೋಡಿನ ಕಟ್ಟೆಮಾಡು ಶ್ರೀಮಹಾ ಮೃತ್ಯುಂಜಯ ದೇವಾಲಯದ ಜಾತ್ರಾ ಮಹೋತ್ಸವದಲ್ಲಿ ಕೊಡವ ಸಾಂಪ್ರದಾಯಿಕ ಕುಪ್ಯಚೇಲೆಯನ್ನು ಧರಿಸಿ ದೇವರ ದರ್ಶನ ಪಡೆಯುತ್ತಿದ್ದ ಕೊಡವರನ್ನು ಅವಮಾನಿಸಲಾಗಿದೆ ಮತ್ತು ಹಲ್ಲೆ ಮಾಡಲಾಗಿದೆ ಎಂದು ಆರೋಪಿಸಿರುವ ವಿವಿಧ ಸಂಘಟನೆಗಳು, ಸಧ್ಯದಲ್ಲಿಯೇ “ಕೊಡವರ ನಡೆ ಕಟ್ಟೆಮಾಡು ಕಡೆ” ಬೃಹತ್ ಜಾಥಾ ನಡೆಸಲು ನಿರ್ಧರಿಸಿರುವುದಾಗಿ ತಿಳಿಸಿವೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿರಾಜಪೇಟೆ ಕೊಡವ ಸಮಾಜದ ಗೌರವ ಕಾರ್ಯದರ್ಶಿ ಮಾಳೇಟಿರ ಶ್ರೀನಿವಾಸ್ ಶ್ರೀಮಹಾ ಮೃತ್ಯುಂಜಯ ದೇವಾಲಯದಲ್ಲಿ ನಡೆದ ಘಟನೆಯನ್ನು ತೀವ್ರವಾಗಿ ಖಂಡಿಸುವುದಾಗಿ ತಿಳಿಸಿದರು. ರಾಜಕೀಯ ಹಿನ್ನೆಲೆಯುಳ್ಳ ಕೆಲವು ಅನಾಗರೀಕ ವ್ಯಕ್ತಿಗಳು ಕೊಡವ ಜನಾಂಗದ ಹಕ್ಕನ್ನು ಕಸಿದುಕೊಳ್ಳುವ ಪ್ರಯತ್ನ ಮಾಡಿದ್ದು, ಕೊಡವ ಮಹಿಳೆಯರನ್ನು ಅವಮಾನಿಸಲಾಗಿದೆ, ಕೆಲವರ ಮೇಲೆ ಹಲ್ಲೆಯಾಗಿದೆ ಎಂದು ಆರೋಪಿಸಿದರು.
ವೀರ ಸೇನಾನಿಗಳಾದ ಫೀ.ಮಾ.ಕೆ.ಎಂ.ಕಾರ್ಯಪ್ಪ ಹಾಗೂ ಜನರಲ್ ಕೆ.ಎಸ್.ತಿಮ್ಮಯ್ಯ ಅವರಿಗೆ ಅಪಮಾನ ಮಾಡಿರುವುದನ್ನು ಖಂಡಿಸಿ ನಡೆಸಿದ ಹೋರಾಟಕ್ಕೆ ಒಂದು ಜನಾಂಗ ಬೆಂಬಲ ನೀಡಿರಲಿಲ್ಲ. ಕೊಡವರು ಎಂದಿಗೂ ಅವರ ವಿರೋಧಿಗಳಲ್ಲ, ಮೊದಲು ಆ ಜನಾಂಗ ಒಂದು ಬಾರಿ ಆತ್ಮಾವಲೋಕನ ಮಾಡಿಕೊಳ್ಳಲಿ ಎಂದು ಒತ್ತಾಯಿಸಿದರು.
Kshetra Samachara
28/12/2024 07:24 pm